Select Your Language

Notifications

webdunia
webdunia
webdunia
webdunia

ವಿಜಯನಗರ ಜಿಲ್ಲೆಗೆ ಬಂಪರ್ ಕೊಡುಗೆ ಕೊಟ್ಟ ಸಿಎಂ

ವಿಜಯನಗರ ಜಿಲ್ಲೆಗೆ ಬಂಪರ್ ಕೊಡುಗೆ ಕೊಟ್ಟ ಸಿಎಂ
ಬಳ್ಳಾರಿ , ಮಂಗಳವಾರ, 7 ಸೆಪ್ಟಂಬರ್ 2021 (10:16 IST)
ಬಳ್ಳಾರಿ, ಸೆ 07 :  ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂಪರ್ ಕೊಡುಗೆ ನೀಡಿದ್ದಾರೆ. ಈ ಮೂಲಕ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಅಸಮಾಧಾನ ಶಮನಗೊಳಿಸುವ ಪ್ರಯತ್ನ ಮಾಡಿದ್ದಾರೆ.

ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ವಿಜಯನಗರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 11 ಜಿಲ್ಲಾ ಕಚೇರಿಗಳನ್ನು ಸ್ಥಾಪಿಸಲು ತೀರ್ಮಾನಿಸಲಾಯಿತು. ಹೊಸ ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ಹುದ್ದೆಗಳನ್ನು ಸೃಜನೆ ಮಾಡಲಾಗುತ್ತದೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿ ವಿಜಯನಗರ ಜಿಲ್ಲೆ ರಚನೆಗೆ ಒಪ್ಪಿಗೆ ನೀಡಲಾಗಿತ್ತು.
ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಗೆ ಮೂಲ ಸೌಕರ್ಯ ಒದಗಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ವಿಜಯನಗರ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳ ದುರಸ್ತಿ, ನವೀಕರಣ ಮತ್ತು ಕಛೇರಿ ಮೂಲ ಸೌಕರ್ಯಕ್ಕೆ 53 ಕೋಟಿ ರೂ. ಅನುದಾನ ಒದಗಿಸಲು ಮಂಜೂರಾತಿ ನೀಡಲಾಗಿದೆ. ಹೊಸ ಜಿಲ್ಲೆ ವಿಜಯನಗರಕ್ಕೆ ಹೊಸಪೇಟೆ ಕೇಂದ್ರ ಸ್ಥಾನ. ಹೊಸಪೇಟೆ, ಕೂಡ್ಲಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ, ಹರಪನಹಳ್ಳಿ ತಾಲೂಕುಗಳು ಜಿಲ್ಲೆಗೆ ಸೇರುತ್ತವೆ.
ಸಭೆಯಲ್ಲಿ ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ. ಎಸ್. ಎನ್. ಪ್ರಸಾದ್, ಲೋಕೋಪಯೋಗಿ ಮತ್ತು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ವಿಜಯನಗರ ಜಿಲ್ಲೆ ವಿಶೇಷಾಧಿಕಾರಿ ಅನಿರುದ್ಧ ಶ್ರವಣ್ ಪಿ. ಇತರರು ಪಾಲ್ಗೊಂಡಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ತಜ್ಞರ ಸಮಿತಿ ಆಧರಿಸಿ ರಾಜ್ಯದಲ್ಲಿ1 ರಿಂದ 5 ನೇ ತರಗತಿ ಶಾಲೆ ಆರಂಭ: ಬಿ.ಸಿ. ನಾಗೇಶ್