Select Your Language

Notifications

webdunia
webdunia
webdunia
webdunia

ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿಯೂ ಬಿಜೆಪಿ ಪ್ರಚಾರ: ವಾಹನ ಜಪ್ತಿ

ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿಯೂ ಬಿಜೆಪಿ ಪ್ರಚಾರ: ವಾಹನ ಜಪ್ತಿ
ವಿಜಯಪುರ , ಬುಧವಾರ, 28 ಮಾರ್ಚ್ 2018 (18:55 IST)
ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿಯೂ ಕೂಡ ಬಿಜೆಪಿ ಪ್ರಚಾರ ಆರಂಭಿಸಿದೆ. ಆದರೆ ಪ್ರಚಾರದ ವಾಹನವನ್ನು ಪೋಲಿಸರು ಜಪ್ತಿ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಪ್ರಬಲ ಆಕಾಂಕ್ಷಿಯಿಂದ ಪ್ರಚಾರ ನಡೆದಿತ್ತು.  
ಸಿಂದಗಿ ಮತಕ್ಷೇತ್ರದ ಬಿಜೆಪಿ ಪ್ರಬಲ ಆಕಾಂಕ್ಷಿ ಶಂಭುಲಿಂಗ ಕಕ್ಕಳಮೇಲಿಯ ಪ್ರಚಾರ ವಾಹನವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
 
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಾಧ್ಯಕ್ಷ ಅಮೀತ ಷಾ, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಫೋಟೊ ಇರುವ ಪ್ರಚಾರದ ವಾಹನ ಇದಾಗಿದೆ. ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ ಸಿಂದಗಿ ಪೊಲೀಸರು ವಾಹನವನ್ನು ಜಪ್ತಿ ಮಾಡಿದ್ದಾರೆ.  

Share this Story:

Follow Webdunia kannada

ಮುಂದಿನ ಸುದ್ದಿ

ನೀತಿ ಸಂಹಿತೆ ಉಲ್ಲಂಘಿಸಿದ ಜೆಡಿಎಸ್ ಅಭ್ಯರ್ಥಿಯಿಂದ ಭೋಜನಕೂಟ