ಬಜೆಟ್ ಅಧಿವೇಶನಕ್ಕೆ ತೊಡಕು?

Webdunia
ಭಾನುವಾರ, 9 ಜನವರಿ 2022 (13:02 IST)
ಹೊಸದಿಲ್ಲಿ : ಸಂಸತ್ನ ಬಜೆಟ್ ಅಧಿವೇಶನಕ್ಕೂ ಮುನ್ನ ಆಘಾತ ಎದುರಾಗಿದೆ.

400ಕ್ಕೂ ಹೆಚ್ಚು ಸಂಸತ್ ಸಿಬ್ಬಂದಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಜನವರಿ 4 ರಿಂದ 8ರವರೆಗೆ ಸಂಸತ್ನ 1409 ಉದ್ಯೋಗಿಗಳು ಹಾಗೂ ಭದ್ರತಾ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ಅವರಲ್ಲಿ 402 ಸಿಬ್ಬಂದಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ವರದಿಯಾಗಿದೆ. ಅವರ ಮಾದರಿಗಳನ್ನು ಓಮಿಕ್ರಾನ್ ಪರೀಕ್ಷೆಗಾಗಿ ಜಿನೋಮ್ ಸೀಕ್ವೆನ್ಸಿಂಗ್ಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಜನವರಿ 4-8ರ ಅವಧಿಯಲ್ಲಿ ಸುಮಾರು 402 ಸಿಬ್ಬಂದಿ ಕೋವಿಡ್ 19 ಸೋಂಕಿಗೆ ಒಳಗಾಗಿದ್ದಾರೆ. ಎಲ್ಲ ಮಾದರಿಗಳನ್ನೂ ಓಮಿಕ್ರಾನ್ ತಳಿಯನ್ನು ದೃಢಪಡಿಸಿಕೊಳ್ಳಲು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಲಾಗಿದೆ' ಎಂದು ಎಎನ್ಐ ಸುದ್ದಿಸಂಸ್ಥೆಗೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಂಸತ್ ಸಿಬ್ಬಂದಿ ವಿಭಾಗದ ಆಂತರಿಕ ಸಂದೇಶದಂತೆ, ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊಸ ವರ್ಷದ ಪಾರ್ಟಿ ಮಾಡುವವರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್

2026ರ ಹೊಸ ವರ್ಷದಂದು ಸಂಭ್ರಮಕ್ಕೆ ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಇಂಡೋನೇಷ್ಯಾ ವೃದ್ಧಾಶ್ರಮದಲ್ಲಿ ಬೆಂಕಿ ಅವಘಡ: 10 ವೃದ್ಧರು ಸಜೀವ ದಹನ

ಏನಿದು ದೇಶವನ್ನೇ ಬೆಚ್ಚಿಬೀಳಿಸಿದ ಉನ್ನಾವೋ ಅತ್ಯಾಚಾರ ಪ್ರಕರಣ, ಸಂಪೂರ್ಣ ಮಾಹಿತಿ ಇಲ್ಲಿದೆ

ಉನ್ನಾವೋ ಅತ್ಯಾಚಾರ ಪ್ರಕರಣ: ಸುಪ್ರೀಂ ತೀರ್ಪಿಗೆ ಸಂತ್ರಸ್ತೆ ಶ್ಲಾಘನೆ

ಮುಂದಿನ ಸುದ್ದಿ
Show comments