Select Your Language

Notifications

webdunia
webdunia
webdunia
webdunia

ಶಾಲೆ ನಡೆಸುವ ಬಗ್ಗೆ ತೀರ್ಮಾನ: ಬಿ ಸಿ ನಾಗೇಶ್

ಶಾಲೆ ನಡೆಸುವ ಬಗ್ಗೆ ತೀರ್ಮಾನ: ಬಿ ಸಿ ನಾಗೇಶ್
ಬೆಂಗಳೂರು , ಬುಧವಾರ, 12 ಜನವರಿ 2022 (16:10 IST)
ಬೆಂಗಳೂರು : ಕೊರೊನಾ ಪ್ರಕರಣಗಳ ವಾಸ್ತವವನ್ನು ನೋಡಿಕೊಂಡು ರಾಜ್ಯದಲ್ಲಿ ಶಾಲೆಗಳನ್ನು ನಡೆಸಲು ತೀರ್ಮಾನ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಮಾಹಿತಿ ನೀಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಪ್ರತಿ ದಿನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಜತೆ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ.

ಒಂದೂವರೆ ವರ್ಷದಿಂದ ರಾಜ್ಯದಲ್ಲಿ ಶಾಲೆಗಳನ್ನು ಮುಚ್ಚಿದ ಕಾರಣ ಸಾಕಷ್ಟು ಸಮಸ್ಯೆ ಉಂಟಾಗಿದೆ. ಆದರೂ ಕಳೆದ 4 ತಿಂಗಳಿನಿಂದ ಸತತ ಪ್ರಯತ್ನ ನಡೆಸಿ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಶಾಲೆಗಳನ್ನು ನಡೆಸುವ ತೀರ್ಮಾನ ಇದೆ.

ಈ ತನಕ ಮಕ್ಕಳಿಗೆ ಪಾಸಿಟಿವ್ ತಗುಲಿಲ್ಲ. ಬೆಂಗಳೂರಿನಲ್ಲಿ ಜನವರಿ 19 ರ ನಂತರ 1 ರಿಂದ 9 ನೇ ತರಗತಿ ಮಕ್ಕಳಿಗೆ ರಜೆ ಮುಂದುವರೆಸುವ ತೀರ್ಮಾನ ಕೈಗೊಳ್ಳಲಾಗುತ್ತದೆ. ನಿನ್ನೆ ತನಕ 1 ಸಾವಿರ ಮಕ್ಕಳಿಗೆ ಕೋವಿಡ್ ಸೋಂಕು ತಗುಲಿದೆ. ಈಗಾಗಲೇ ರಾಜಧಾನಿಯಲ್ಲಿ ಅತಿ ಹೆಚ್ಚು ಮಕ್ಕಳಿಗೆ ಸೋಂಕು ತಗುಲಿದೆ.

ಬೆಳಗಾವಿ, ಮಂಗಳೂರಿನಲ್ಲೂ ಮಕ್ಕಳಿಗೆ ಕೋವಿಡ್ ತಗಲಿರುವುದು ತಿಳಿದು ಬಂದಿದೆ. ಹೀಗಾಗಿ ಬೆಂಗಳೂರಿನಲ್ಲಿ ರಜೆ ವಿಸ್ತರಣೆಯಾಗುವ ಸಾಧ್ಯತೆಯಿದೆ. ಇದನ್ನು ತಾಂತ್ರಿಕ ಸಲಹಾ ಸಮಿತಿ ನಿರ್ಧಾರವನ್ನು ಸರ್ಕಾರಕ್ಕೆ ತಿಳಿಸಲಿದೆ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಹಬ್ಬಕ್ಕೆ ಬಂದು ಮಕ್ಕಳ ಪ್ರಾಣ ತೆಗೆದ ತಂದೆ!