ನವದೆಹಲಿ : ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸೋಮವಾರ ಸಿದ್ಧೇಶ್ವರ ಶ್ರೀಗಳು ಲಿಂಗೈಕ್ಯರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡಿ ಶ್ರೀಗಳಿಗೆ ಗೌರವ ನಮನ ಸಲ್ಲಿಸಿದ್ದಾರೆ. “ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ.
ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಮತ್ತು ಅವರ ಜ್ಞಾನೋತ್ಸಾಹಕ್ಕಾಗಿ ಅವರು ಗೌರವಗಳಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ. ಓಂ. ಶಾಂತಿ” ಎಂದು ಟ್ವೀಟ್ ಮಾಡಿದ್ದಾರೆ.