Publish Date: Fri, 13 Jul 2018 (09:15 IST)
Updated Date: Fri, 13 Jul 2018 (09:17 IST)
ನವದೆಹಲಿ: 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಭಾರತ ಹಿಂದೂ ಪಾಕಿಸ್ತಾನವಾಗಲಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಹೈಕಮಾಂಡ್ ಎಚ್ಚರಿಕೆ ನೀಡಿದೆ.
ತಿರುವನಂತಪುರಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತರೂರ್ ಬಿಜೆಪಿ ಗೆದ್ದ ಸಂವಿಧಾನ ಬದಲಾಯಿಸಬಹುದು. ಭಾರತ ಹಿಂದೂ ಪಾಕಿಸ್ತಾನವಾಗಬಹುದು ಎಂದಿದ್ದರು.
ಈ ಹೇಳಿಕೆ ಖಂಡಿಸಿದ್ದ ಬಿಜೆಪಿ ಸ್ವತಃ ರಾಹುಲ್ ಗಾಂಧಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ತರೂರ್ ಗೆ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಿದೆ. ಆದರೆ ತರೂರ್ ಈ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷಮೆ ಯಾಚಿಸಲು ನಿರಾಕರಿಸಿದ್ದಾರೆ. ಬಿಜೆಪಿಯವರು ಹಿಂದೂ ರಾಷ್ಟ್ರ ಎಂಬ ಪದ ಬಳಸಬಹುದಾದರೆ ನಾನ್ಯಾಕೆ ಇಂತಹ ಪದ ಬಳಕೆ ಮಾಡಬಾರದು ಎಂದು ಅವರು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.
Krishnaveni K
Publish Date: Fri, 13 Jul 2018 (09:15 IST)
Updated Date: Fri, 13 Jul 2018 (09:17 IST)