Publish Date: Tue, 05 Jun 2018 (10:30 IST)
Updated Date: Tue, 05 Jun 2018 (10:32 IST)
ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಹೈಕಮಾಂಡ್ ಜತೆ ಚರ್ಚೆ ನಡೆಸುತ್ತಿದ್ದಾರೆ. ಆದರೆ ಇದೇ ವೇಳೆ ಬಂಡಾಯ, ಅಸಮಾಧಾನ ಶಮನಕ್ಕೆ ಹೈಕಮಾಂಡ್ ಭಾರೀ ತಂತ್ರ ರೂಪಿಸಿದೆ.
ಒಂದೇ ಹಂತದಲ್ಲಿ ಎಲ್ಲಾ ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಹಿರಿಯ ನಾಯಕರು ಒತ್ತಾಯಿಸುತ್ತಿದ್ದಾರೆ. ಆದರೆ ಹೈಕಮಾಂಡ್ ಎರಡು ಹಂತಗಳಲ್ಲಿ ಸಚಿವ ಸ್ಥಾನ ಹಂಚಿಕೆ ಮಾಡಲು ಚಿಂತನೆ ನಡೆಸಿದೆ.
ಮೊದಲು 10 ರಿಂದ 12 ಮಂದಿ ಸಚಿವರ ಪಟ್ಟಿ ಬಿಡುಗಡೆ ಮಾಡಿ ನಂತರ ಪಕ್ಷದ ನಾಯಕರಲ್ಲಿ ಅಸಮಾಧಾನ ನೋಡಿಕೊಂಡು ಎರಡನೇ ಹಂತದಲ್ಲಿ ಉಳಿದ 10 ಸ್ಥಾನಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಮೂಲಕ ಪಕ್ಷದಲ್ಲಿ ಅಸಮಾಧಾನ ಉಂಟಾಗದಂತೆ ನೋಡಿಕೊಳ್ಳಲು ಹೈಕಮಾಂಡ್ ಯೋಜನೆ ರೂಪಿಸಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.