Publish Date: Mon, 25 Jun 2018 (08:44 IST)
Updated Date: Mon, 25 Jun 2018 (08:46 IST)
ಮಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ನಾಯಕತ್ವ, ಸ್ಥಾನ ಹಂಚಿಕೆ ಕುರಿತಂತೆ ಉಂಟಾಗಿರುವ ರಾಜಕೀಯ ಅಸಮಾಧಾನಗಳು ಧರ್ಮಸ್ಥಳದ ಶಾಂತಿವನ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಶಿಫ್ಟ್ ಆಗಿದೆ.
ಇಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಗಾಗಿ ನಿನ್ನೆ ಕಾಂಗ್ರೆಸ್ ನಾಯಕರ ದಂಡೇ ಹರಿದುಬಂದಿತ್ತು. ಸಿದ್ದರಾಮಯ್ಯ ಆಪ್ತ ಶಾಸಕರಾದ ಮುನಿರತ್, ಭೈರತಿ ಬಸವರಾಜ್ ಸೇರಿದಂತೆ ಹಲವು ನಾಯಕರು ನಿನ್ನೆ ಇಲ್ಲಿಗೆ ಆಗಮಿಸಿದ್ದರು.
ಅದರ ಜತೆಗೆ ಡಿಸಿಎಂ ಡಾ. ಜಿ ಪರಮೇಶ್ವರ್ ಕೂಡಾ ಸಿದ್ದರಾಮಯ್ಯ ಭೇಟಿಗೆ ಆಗಮಿಸಿ ಸಂಪುಟ ದರ್ಜೆ ಸ್ಥಾನ, ನಿಗಮ ಮಂಡಳಿ ಅಧ್ಯಕ್ಷರ ಸ್ಥಾನ ಹಂಚಿಕೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ಬಜೆಟ್ ಮಂಡನೆ ಕುರಿತಂತೆ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆ ಎಂಬ ವದಂತಿಗಳ ಹಿನ್ನಲೆಯಲ್ಲೇ ಪರಮೇಶ್ವರ್ ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ, ಸಿದ್ದರಾಮಯ್ಯಗೆ ಸಂಪುಟ ದರ್ಜೆ ಸ್ಥಾನ ಮಾನ ನೀಡಲು ನಿರ್ಧರಿಸಲಾಗಿದೆ. ಅಂತೂ ಶಾಂತಿವನದಲ್ಲೇ ಕುಳಿತು ರಾಜ್ಯ ರಾಜಕಾರಣವನ್ನು ಸಿದ್ದರಾಮಯ್ಯ ನಿಯಂತ್ರಿಸುತ್ತಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.