Publish Date: Mon, 09 Apr 2018 (06:39 IST)
Updated Date: Mon, 09 Apr 2018 (06:42 IST)
ನವದೆಹಲಿ : ಅಫಜಲ್ಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು ಕಾಂಗ್ರೆಸ್ ತೊರೆದು ಭಾನುವಾರ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಉತ್ತರ ಕರ್ನಾಟಕದ ಪ್ರಭಾವಿ ಕಾಂಗ್ರೆಸ್ ಶಾಸಕರಾಗಿದ್ದ ಮಾಲೀಕಯ್ಯ ಗುತ್ತೇದಾರ್ ಅವರು ದೆಹಲಿಯಲ್ಲಿ ನಿನ್ನೆ ಪಕ್ಷದ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಪಕ್ಷದ ಶಾಲು ಹೊದ್ದಿಸುವುದರ ಮೂಲಕ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಕೇಂದ್ರ ಸಚಿವರಾದ ಅನಂತಕುಮಾರ್, ಪಿಯೂಷ್ ಗೋಯಲ್, ಪ್ರಕಾಶ್ ಜಾವಡೇಕರ್, ಸಂಸದ ಬಿ ಶ್ರೀರಾಮುಲು, ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ಅವರು ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರು ಅಫಜಲ್ಪುರ ವಿಧಾನಸಭಾ ಕ್ಷೇತ್ರದಲ್ಲಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಇದೀಗ ಬಿಜೆಪಿ ಸೇರ್ಪಡೆಯಾಗಿದ್ದ ಕಾರಣ ಈ ಬಾರಿಯೂ ಕೂಡ ಅವರಿಗೆ ಪಕ್ಷದ ಟಿಕೆಟ್ ಖಚಿತವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ
pavithra
Publish Date: Mon, 09 Apr 2018 (06:39 IST)
Updated Date: Mon, 09 Apr 2018 (06:42 IST)