Publish Date: Sun, 17 Jun 2018 (07:48 IST)
Updated Date: Sun, 17 Jun 2018 (07:49 IST)
ನವದೆಹಲಿ: 2019 ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮೋದಿ ನೇತೃತ್ವದ ಬಿಜೆಪಿ ಮಣಿಸಲು ಭಾರೀ ರಣತಂತ್ರವನ್ನು ರೂಪಿಸುತ್ತಿದೆ.
ಈ ಬಾರಿ ಏಕಾಂಗಿಯಾಗಿ ಕಾಂಗ್ರೆಸ್ ಲೋಕಸಭೆ ಚುನಾವಣೆ ಸ್ಪರ್ಧಿಸುವ ಇರಾದೆ ಹೊಂದಿಲ್ಲ ಎನ್ನಲಾಗಿದೆ. ಇದಕ್ಕಾಗಿ ಈಗಾಗಲೇ ತನ್ನ ಮಿತ್ರ ಪಕ್ಷಗಳೊಂದಿಗೆ ಮಹಾಘಟಬಂಧನ್ ಮಾಡಿಕೊಂಡಿದೆ.
ಅದೇ ರಣತಂತ್ರದೊಂದಿಗೆ ಕೇವಲ 250 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಬಹುದೆಂದು ಲೆಕ್ಕಾಚಾರ ಹಾಕಲಾಗಿದೆ. ಸ್ವಾತಂತ್ರ್ಯ ಬಂದ ಮೇಲೆ ಕಾಂಗ್ರೆಸ್ ಇಷ್ಟು ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದು ಇದೇ ಮೊದಲು. ಮಿತ್ರ ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ತನ್ನ ಕೆಲವೊಂದು ಕ್ಷೇತ್ರಗಳನ್ನು ಮಿತ್ರ ಪಕ್ಷಗಳಿಗೆ ಬಿಟ್ಟುಕೊಟ್ಟು ಬಿಜೆಪಿ ನೇತೃತ್ವದ ಎನ್ ಡಿಎ ಮಣಿಸುವ ಲೆಕ್ಕಾಚಾರ ಹಾಕಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.