Publish Date: Mon, 22 Nov 2021 (14:03 IST)
Updated Date: Mon, 22 Nov 2021 (23:06 IST)
ಬೆಂಗಳೂರಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನಲೆ ಅಪಾರ ಪ್ರಮಾಣದಲ್ಲಿ ಹಾನಿಯುಂಟಾಗಿದ್ದು ಸಮಸ್ಯೆ ಬಗೆಹರಿಸಲು ಸಿಎಂ ಸೂಚನೆ ನೀಡಿದ್ದಾರೆ.
ನಿನ್ನೆ ಸಂಜೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ತುರ್ತು ಸಭೆ ಕರೆದಿದ್ದ ಬೊಮ್ಮಾಯಿ ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದ್ದಾರೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಗುಂಡಿ ಬಿದ್ದಿದ್ದು ಅವುಗಳನ್ನ ಮುಚ್ಚುವಂತೆ ಆದೇಶಿಸಿದ್ದಾರೆ. ಅಲ್ಲದೇ ಪ್ರತಿ ವಾರ್ಡ್ಮಟ್ಟದಲ್ಲಿ ತಲಾ 25 ಲಕ್ಷ ಬಿಡುಗಡೆ ಮಾಡಲಾಗಿದ್ದು ಹಣವನ್ನ ಗುಂಡಿ ಮುಚ್ಚಲು ಬಳಕೆ ಮಾಡಬೇಕಿದೆ. ಇದರ ಜೊತೆಗೆ ಹ್ಯಾಲೋಜನ್ ಲೈಟ್ ಅಳವಡಿಸಿ ಯಾವುದೇ ಅವಘಡ ಸಂಭವಿಸದಂತೆ ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ.