Select Your Language

Notifications

webdunia
webdunia
webdunia
webdunia

ಮುಂದುವರೆದ ಮಳೆ: 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

ಮುಂದುವರೆದ ಮಳೆ: 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ
ಬೆಂಗಳೂರು , ಗುರುವಾರ, 27 ಜುಲೈ 2023 (08:05 IST)
ಬೆಂಗಳೂರು: ರಾಜ್ಯದಲ್ಲಿ ಮಳೆರಾಯ ನಿರಂತರವಾಗಿ ಅಬ್ಬರಿಸುತ್ತಿದ್ದಾನೆ. ಇದರಿಂದ ಜೀವನದಿಗಳಿಗೆ ಜೀವ ಕಳೆ ಬಂದಿದ್ದು, ಉಕ್ಕಿ ಹರಿಯುತ್ತಿವೆ. ಜೊತೆಗೆ ಕೆಲವು ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ.
 
ಸೇತುವೆಗಳು ಸಹ ಮುಳುಗಡೆಯಾಗಿದ್ದು, ಸಂಚಾರ ಬಂದ್ ಆಗಿವೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮಳೆ ಮುಂದುವರೆಯಲಿದ್ದು, ಹಾಗಾಗಿ ವಿಜಯನಗರ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ರಾಯಚೂರು, ಹಾಸನ ಜಿಲ್ಲೆಗಳಲ್ಲಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ವಿಜಯನಗರ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿಕೆ ಹಿನ್ನೆಲೆ ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಕೂಡ್ಲಿಗಿ ಹರಪನಹಳ್ಳಿ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಆದೇಶಿಸಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ನಾಳೆ ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ- ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಆದೇಶ ಹೊರಡಿಸಿದ್ದಾರೆ. ರಜೆ ದಿನದ ತರಗತಿಗಳನ್ನ ಮುಂದಿನ ಶನಿವಾರ ಇಲ್ಲವೇ ಭಾನುವಾರ ನಡೆಸುವಂತೆ ಸೂಚನೆ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿದೇಶಿ ಹಾಡು, ಚಲನಚಿತ್ರಕ್ಕಿಲ್ಲ ಅನುಮತಿ!