Select Your Language

Notifications

webdunia
webdunia
webdunia
webdunia

ಮುಂದುವರಿದ ಮಳೆ: ಗುರುವಾರವೂ ಶಾಲಾ, ಕಾಲೇಜುಗಳಿಗೆ ರಜೆ

ಮುಂದುವರಿದ ಮಳೆ: ಗುರುವಾರವೂ ಶಾಲಾ, ಕಾಲೇಜುಗಳಿಗೆ ರಜೆ
ಉಡುಪಿ , ಗುರುವಾರ, 7 ಜುಲೈ 2022 (07:33 IST)
ಉಡುಪಿ : ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಳೆ ಕೂಡ ಶಾಲಾ- ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಮಳೆ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳು ಜುಲೈ 7 ರಂದು ಕೂಡ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ್ದಾರೆ. 

ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳು, ಅಂಗನವಾಡಿಯಿಂದ ಡಿಗ್ರಿ ಕಾಲೇಜ್, ಸ್ನಾತಕೋತ್ತರ, ಡಿಪ್ಲೊಮಾ, ಐಟಿಐ, ಎಂಜಿನಿಯರಿಂಗ್ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ರಜೆಯನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಘೋಷಣೆ ಮಾಡಿದ್ದಾರೆ. ಅಲ್ಲದೆ ನಾಳೆ ದ.ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. 

ಇತ್ತ ಉಡುಪಿಯಲ್ಲಿ ಕೂಡ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜುಲೈ 7 ಗುರುವಾರ ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜಿಗೆ ರಜೆ ನೀಡಿ ಉಡುಪಿ ಡಿಸಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೂಸ್ಟರ್ ಡೋಸ್ ನಡುವಿನ ಅಂತರ ಇಳಿಕೆ