ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಆಗುತ್ತಿದ್ದು, ಇಂದು 1,151 ಮಂದಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.
									
			
			 
 			
 
 			
					
			        							
								
																	ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು ರಾಜ್ಯದಲ್ಲಿ 837 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
									
										
								
																	ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,46,484 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇಂದು 25,481 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಇಲ್ಲಿಯವರೆಗೆ 6,76,03,595 ಮಂದಿಯನ್ನು ಟೆಸ್ಟ್ ಮಾಡಲಾಗಿದೆ. 
									
											
							                     
							
							
			        							
								
																	ಕೋವಿಡ್ನಿಂದ ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಇದುವರೆಗೆ 40,090 ಮಂದಿ ಮಹಾಮಾರಿಯಿಂದ ಜೀವ ಕಳೆದುಕೊಂಡಿದ್ದಾರೆ. ಇಂದಿನ ಪಾಸಿಟಿವಿಟಿ ಶೇ.4.51 ಇದೆ. 9,162 ಸಕ್ರಿಯ ಪ್ರಕರಣಗಳಿವೆ.