ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ.
ನಿನ್ನೆ 1,736 ಇದ್ದ ಸೋಂಕಿನ ಸಂಖ್ಯೆ ಇಂದು ರಾಜ್ಯದಲ್ಲಿ 2,136ಕ್ಕೆ ಏರಿಕೆ. ನಿನ್ನೆ ಯಾವುದೇ ಸಾವು ಪ್ರಕರಣ ವರದಿಯಾಗಿರಲಿಲ್ಲ. ಇಂದು ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ 1,845 ಮಂದಿ ಕೊರೊನಾದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,61,187 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ.
ಇದುವೆರೆಗೆ ಒಟ್ಟು 40,108 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಇಂದಿನ ಪಾಸಿಟಿವಿಟಿ ದರ ಶೇ.6.59 ಇದೆ. 11,185 ಸಕ್ರಿಯ ಪ್ರಕರಣಗಳಿವೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!