Select Your Language

Notifications

webdunia
webdunia
webdunia
webdunia

ದೇಶದಲ್ಲಿ ಹೆಚ್ಚಿದ ಕೊರೋನಾ ಅಬ್ಬರ!

ದೇಶದಲ್ಲಿ ಹೆಚ್ಚಿದ ಕೊರೋನಾ ಅಬ್ಬರ!
ನವದೆಹಲಿ , ಸೋಮವಾರ, 8 ಆಗಸ್ಟ್ 2022 (09:05 IST)
ಹಲವು ರಾಜ್ಯಗಳಲ್ಲಿ ಈಗಾಗಲೇ ಪ್ರತಿದಿನ ಸಾವಿರಕ್ಕಿಂತ ಅಧಿಕ ಕೊರೋನಾ ಕೇಸ್ಗಳು ದೃಢಪಡುತ್ತಿವೆ.

ಈ ಹಿನ್ನೆಲೆಯಲ್ಲಿ ಅಲರ್ಟ್  ಆಗಿರುವ ಕೇಂದ್ರ ಸರ್ಕಾರ, 7 ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,738 ಹೊಸ ಕೊರೋನಾ ವೈರಸ್ ಸೋಂಕುಗಳು ವರದಿಯಾಗಿದೆ.

ಈ ಮೂಲಕ ದೇಶದಲ್ಲಿ ಒಟ್ಟು ಕೊರೋನಾ ಪ್ರಕರಣಗಳ ಸಂಖ್ಯೆ 4,41,45,732ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 40 ಸಾವುಗಳು ದಾಖಲಾಗಿ ಒಟ್ಟು ಸಾವಿನ ಸಂಖ್ಯೆ 5,26,689 ಕ್ಕೆ ಏರಿದೆ.
ಇದರಲ್ಲಿ ಕೇರಳ ರಾಜ್ಯ ಒಂದರಲ್ಲೇ 8 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಕೊರೊನಾ ಚೇತರಿಕೆ ದರವು 98.50 ಪ್ರತಿಶತದಷ್ಟು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

9 ವರ್ಷದ ಹಿಂದೆ ಕಳೆದುಹೋಗಿದ್ದ ಬಾಲಕಿ ಈಗ ಪತ್ತೆ: ಆರೋಪಿಗಳ ಬಂಧನ