Publish Date: Mon, 20 Dec 2021 (07:10 IST)
Updated Date: Sun, 19 Dec 2021 (22:46 IST)
ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಭಾನುವಾರ 300 ಕೊರೊನಾ ವೈರಸ್ ಹೊಸ ಪ್ರಕರಣಗಳು ಪತ್ತೆಯಾಗಿವೆ.
ಈ ಮೂಲಕ ರಾಜ್ಯದಲ್ಲಿ ಈವರೆಗೆ ದೃಢಪಟ್ಟ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 30,02,427ಕ್ಕೆ ಏರಿಕೆ ಕಂಡಿದೆ. ಈ ಪೈಕಿ ರಾಜ್ಯದಲ್ಲಿ ಈವರೆಗೂ 14 ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ.
ಭಾನುವಾರ ಕೂಡಾ ರಾಜ್ಯಾದ್ಯಂತ 279 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ರಾಜ್ಯಾದ್ಯಂತ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಒಟ್ಟು ಸಂಖ್ಯೆ 29,56,970ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಸದ್ಯ ಇರುವ ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 7,140ಕ್ಕೆ ಏರಿಕೆ ಕಂಡಿದೆ.
ಚಿಕಿತ್ಸೆ ಫಲಿಸದೇ ಭಾನುವಾರ ಓರ್ವ ಕೊರೊನಾ ಸೋಂಕಿತನ ಸಾವನ್ನಪ್ಪಿದ್ದಾನೆ. ರಾಜ್ಯಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 38,288ಕ್ಕೆ ಏರಿಕೆ ಕಂಡಿದೆ.