Publish Date: Tue, 10 May 2022 (08:09 IST)
Updated Date: Tue, 10 May 2022 (00:53 IST)
ಬೆಂಗಳೂರು : ಇಂದು ರಾಜ್ಯದಲ್ಲಿ ಕೊರೊನಾ ಸೋಂಕಿತರಿಗಿಂತ ಗುಣಮುಖರ ಸಂಖ್ಯೆಯಲ್ಲೇ ಏರಿಕೆ ಕಂಡುಬಂದಿದೆ.
ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, 128 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕು ಸುಧಾರಿಸುತ್ತಿರುವ ವೇಳೆ ಈ ವಾರದಲ್ಲಿ ಸೋಂಕಿನಿಂದ ಜನರು ಮೃತಪಡುತ್ತಿದ್ದಾರೆ.
ಈ ಹಿನ್ನೆಲೆ ಆರೋಗ್ಯ ಇಲಾಖೆ ಕೊರೊನಾ ಮುನ್ನೆಚರಿಕೆ ಕ್ರಮಗಳ ಕಡೆ ಹೆಚ್ಚು ಗಮನ ಹರಿಸಿದೆ. ಇಂದು 11,142 ಜನರು ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದಾರೆ. ಇಂದು 90 ಮಂದಿಗೆ ಸೋಂಕು ತಗುಲಿದೆ.
ಇಲ್ಲಿವರೆಗೂ 40,063 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ. 0.80% ಸೋಂಕು ಪ್ರಮಾಣ ಇದೆ. 1.11% ಮರಣ ಪ್ರಮಾಣ ದಾಖಲಾಗಿದೆ. ರಾಜ್ಯದಲ್ಲಿ ಇಂದು 63,180 ಜನರು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.
ಒಟ್ಟು 11,142 ಸ್ಯಾಂಪಲ್ (ಆರ್ಟಿಪಿಸಿಆರ್ 9,434 + 1,708 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.