Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ಹೊಸದಾಗಿ 326 ಜನರಿಗೆ ಕೊರೊನಾ ದೃಢ

ಕರ್ನಾಟಕದಲ್ಲಿ ಹೊಸದಾಗಿ 326 ಜನರಿಗೆ ಕೊರೊನಾ ದೃಢ
ಬೆಂಗಳೂರು , ಸೋಮವಾರ, 18 ಅಕ್ಟೋಬರ್ 2021 (09:22 IST)
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ (ಅಕ್ಟೋಬರ್ 17) ಹೊಸದಾಗಿ 326 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,83,459 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,36,039 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 4 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,941 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,450 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 173 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,49,418 ಕ್ಕೆ ಏರಿಕೆಯಾಗಿದೆ. 12,49,418 ಸೋಂಕಿತರ ಪೈಕಿ 12,26,390 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 1 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,210 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,817 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಭಾರತದಲ್ಲಿ ಹೂಡಿಕೆದಾರರಿಗೆ ಅವಕಾಶಗಳ ಮಹಾಪೂರ: ಸೀತಾರಾಮನ್