Select Your Language

Notifications

webdunia
webdunia
webdunia
webdunia

ಡಿಸೆಂಬರ್ ಅಂತ್ಯಕ್ಕೆ ರಾಜ್ಯದ ಎಲ್ಲರಿಗೂ ಕೊರೊನಾ ಲಸಿಕೆ : ಡಾ.ಕೆ. ಸುಧಾಕರ್

ಡಿಸೆಂಬರ್ ಅಂತ್ಯಕ್ಕೆ ರಾಜ್ಯದ ಎಲ್ಲರಿಗೂ ಕೊರೊನಾ ಲಸಿಕೆ : ಡಾ.ಕೆ. ಸುಧಾಕರ್
ನವದೆಹಲಿ , ಭಾನುವಾರ, 3 ಅಕ್ಟೋಬರ್ 2021 (14:35 IST)
ನವದೆಹಲಿ : ಡಿಸೆಂಬರ್ ಅಂತ್ಯದ ವೇಳೆ ರಾಜ್ಯದ ಎಲ್ಲರಿಗೂ ಕೊರೊನಾ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ರಾಜ್ಯದ ಎಲ್ಲರಿಗೂ ಡಿಸೆಂಬರ್ ಅಂತ್ಯದವರೆಗೆ ಕೊರೊನಾ ಲಸಿಕೆ ನೀಡಲಾಗುವುದು. ಮಕ್ಕಳಿಗೆ ವ್ಯಾಕ್ಸಿನ್ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಶೀಘ್ರದಲ್ಲೇ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.
ಸೆರೋ ಸಮೀಕ್ಷೆ ಪ್ರಕಾರ ರಾಜ್ಯದ ಶೇ.60ರಷ್ಟು ಜನರಲ್ಲಿ ರೋಗನಿರೋಧಕ ಶಕ್ತಿ ಇದೆ. ಕೆಲವು ಕಡೆ ಶೇ.70ಕ್ಕೂ ಹೆಚ್ಚು ರೋಗನಿರೋಧಕ ಶಕ್ತಿ ಇದೆ. ರೂಪಾಂತರಿ ಕೊರೊನಾ ಬಗ್ಗೆ ಈಗಲೇ ಹೇಳುವುದು ಕಷ್ಟ. ನವೆಂಬರ್ ಅಥವಾ ಡಿಸೆಂಬರ್ವರೆಗೂ ಕಾದು ನೋಡಬೇಕು ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರಲ್ಲಿ ಪ್ರವಾಸಿಗರ ದಂಡು, ಪ್ರವಾಸಿ ತಾಣಗಳಲ್ಲಿ ಭಾರೀ ಜನಜಂಗುಳಿ!