Select Your Language

Notifications

webdunia
webdunia
webdunia
webdunia

ಕೋವಿಡ್-19 ಕಡಿಮೆ ಮಟ್ಟದಲ್ಲಿ ಸಕ್ರಿಯ ಪ್ರಕರಣಗಳು

ಕೋವಿಡ್-19 ಕಡಿಮೆ ಮಟ್ಟದಲ್ಲಿ ಸಕ್ರಿಯ ಪ್ರಕರಣಗಳು
ನವದೆಹಲಿ , ಬುಧವಾರ, 20 ಅಕ್ಟೋಬರ್ 2021 (12:03 IST)
ನವದೆಹಲಿ : ದೇಶದಾದ್ಯಂತ 24 ಗಂಟೆಗಳ ಅಂತರದಲ್ಲಿ ಕೋವಿಡ್-19 ದೃಢಪಟ್ಟ 14,623 ಹೊಸ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 3,41,08,996ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 1,78,098ಕ್ಕೆ ಇಳಿಕೆಯಾಗಿದೆ, ಇದು ಕಳೆದ 229 ದಿನಗಳಲ್ಲೇ ದಾಖಲಾಗಿರುವ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ.
ಇದೇ ಅವಧಿಯಲ್ಲಿ ಕೋವಿಡ್ ಕಾರಣಗಳಿಂದಾಗಿ 197 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 4,52,651 ತಲುಪಿದೆ. ಕಳೆದ 26 ದಿನಗಳಿಂದ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 30,000ಕ್ಕಿಂತ ಕಡಿಮೆ ಮಟ್ಟದಲ್ಲಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ. ಕೇರಳದಲ್ಲಿ 7,643 ಹೊಸ ಪ್ರಕರಣಗಳು ಮತ್ತು 77 ಮಂದಿ ಸಾವಿಗೀಡಾಗಿರುವುದು ವರದಿಯಾಗಿದೆ.
ಒಟ್ಟು ಕೋವಿಡ್ ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇಕಡ 0.52ರಷ್ಟಿದ್ದು, 2020ರ ಮಾರ್ಚ್ ನಂತರ ಮೊದಲ ಬಾರಿಗೆ ಈ ಮಟ್ಟಕ್ಕೆ ಇಳಿಕೆಯಾಗಿದೆ. 24 ಗಂಟೆಗಳ ಅಂತರದಲ್ಲಿ 5,020 ಕೋವಿಡ್ ಸಕ್ರಿಯ ಪ್ರಕರಣಗಳು ಕಡಿಮೆಯಾಗಿವೆ. ಹಾಗೇ ಕೋವಿಡ್ನಿಂದ ಗುಣಮುಖರಾಗುವವರ ಪ್ರಮಾಣ ಶೇಕಡ 98.15ಕ್ಕೆ ಏರಿಕೆಯಾಗಿದೆ. ಈವರೆಗೂ ದೇಶದಲ್ಲಿ 99,12,82,283 ಡೋಸ್ ಕೋವಿಡ್-19 ಲಸಿಕೆ ವಿತರಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಬಗ್ಗೆ ಶೀಘ್ರವೇ ತೀರ್ಮಾನ : ಸಿಎಂ