Select Your Language

Notifications

webdunia
webdunia
webdunia
webdunia

ಕೋವಿಡ್ ನಿರ್ಬಂಧಗಳು ರದ್ದು!

ಕೋವಿಡ್ ನಿರ್ಬಂಧಗಳು ರದ್ದು!
ನವದೆಹಲಿ , ಬುಧವಾರ, 23 ಮಾರ್ಚ್ 2022 (14:48 IST)
ನವದೆಹಲಿ : ಮಾರ್ಚ್ 31ರ ಬಳಿಕ ಕೋವಿಡ್ ನಿರ್ಬಂಧಗಳನ್ನು ತೆಗೆದು ಹಾಕಲಾಗುವುದು ಎಂದು ಕೇಂದ್ರ ಬುಧವಾರ ತಿಳಿಸಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿ ಜಾರಿಗೊಳಿಸಿದ್ದ ಕೋವಿಡ್ ಸುರಕ್ಷತಾ ಕ್ರಮಗಳನ್ನು ಮಾರ್ಚ್ 31ರ ಬಳಿಕ ಅನುಸರಿಸುವ ಅಗತ್ಯವಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯ ಬುಧವಾರ ತಿಳಿಸಿದೆ. 

ಕೇಂದ್ರ ವಿಧಿಸಿರುವ ಎಲ್ಲಾ ಅಸ್ತಿತ್ವದಲ್ಲಿರುವ ಕೋವಿಡ್ ನಿರ್ಬಂಧಗಳನ್ನು ಮಾರ್ಚ್ 31 ರಂದು ತೆಗೆದುಹಾಕಲು ನಿರ್ಧರಿಸಲಾಗಿದೆ.

ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಳ್ಳಲಾಗಿದ್ದ ವಿಪತ್ತು ನಿರ್ವಹಣಾ ಕಾಯ್ದೆಯನ್ನು ಅನ್ವಯಿಸುವ ಅಗತ್ಯವಿಲ್ಲ. ಆದರೆ ಸಾವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಮುಂದುವರಿಸಬೇಕು ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ಸಬ್ಆರ್ಬನ್ ಯೋಜನೆ - ಎಲ್. ಟಿ. ಕಡಿಮೆ ಬಿಡ್