Webdunia - Bharat's app for daily news and videos

Install App

ಕೋವಿಡ್ ಲಸಿಕೆ ಕಡ್ಡಾಯವಲ್ಲ : ಸುಪ್ರೀಂ

Webdunia
ಬುಧವಾರ, 23 ಮಾರ್ಚ್ 2022 (06:18 IST)
ನವದೆಹಲಿ : ಕೋವಿಡ್-19 ಲಸಿಕೆಗಳನ್ನು ಕಡ್ಡಾಯಗೊಳಿಸಿಲ್ಲ. ಆದರೆ ಶೇ.100 ರಷ್ಟು ಲಸಿಕೆ ನೀಡಬೇಕೆಂದು ಹೇಳಲಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಶೇ.100 ರಷ್ಟು ಜನರು ಕೋವಿಡ್ ಲಸಿಕೆಯನ್ನು ಪಡೆಯಲೇಬೇಕು ಎಂದು ಕೇಂದ್ರ ಸರ್ಕಾರವು ಆದೇಶ ನೀಡಿದೆ ಎಂದು ತಮಿಳುನಾಡು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮಿತ್ ಆನಂದ್ ತಿವಾರಿ, ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಅವರ ಪೀಠಕ್ಕೆ ತಿಳಿಸಿದ್ದರು.

ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಮೇಲಿನಂತೆ ಸ್ಪಷ್ಟನೆ ನೀಡಿದ್ದಾರೆ.

ಕೋವಿಡ್ ಲಸಿಕೆಯನ್ನು ಶೇ.100ರಷ್ಟು ನೀಡಬೇಕು ಎಂದು ಕೇಂದ್ರ ಸರ್ಕಾರ ಹೇಳಿರುವುದರಿಂದ ಕಡ್ಡಾಯಗೊಳಿಸಿದ್ದೇವೆ ಎಂದು ತಮಿಳುನಾಡು ತಿಳಿಸಿದೆ. ಶೇ.100ರಷ್ಟು ಲಸಿಕೀಕರಣ ಆಗಬೇಕು ಎಂಬ ನಿಲುವನ್ನು ಕೇಂದ್ರ ವ್ಯಕ್ತಪಡಿಸಿದೆ. ಆದರೆ ಇದು ಆದೇಶವಲ್ಲ ಎಂದು ಮೆಹ್ತಾ ತಿಳಿಸಿದ್ದಾರೆ.
ನಾನು ತಜ್ಞರ ವರದಿಗಳನ್ನು ಸಲ್ಲಿಸಿದ್ದೇನೆ. ಲಸಿಕೆ ಪಡೆಯದ ಜನರು ವೈರಸ್ಗಳ ರೂಪಾಂತರಕ್ಕೆ ಕಾರಣರಾಗಿದ್ದಾರೆ.

ಇತರರಿಗೆ ಸೋಂಕು ತಗುಲುವ ಅಥವಾ ಹರಡುವ ಸಾಧ್ಯತೆಯಿದ್ದರೆ ಅಂತಹ ಆದೇಶಗಳನ್ನು ನೀಡುವ ಅಧಿಕಾರವನ್ನು ರಾಜ್ಯ ಸರ್ಕಾರ ಹೊಂದಿದೆ. ಲಸಿಕೆಗಳು ಗಂಭೀರ ರೋಗವನ್ನು ತಡೆಗಟ್ಟುತ್ತವೆ ಎಂದು ತೋರಿಸಲು ಸಾಕಷ್ಟು ಪುರಾವೆಗಳಿವೆ ಎಂದು ತಿವಾರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments