Publish Date: Fri, 30 Mar 2018 (13:52 IST)
Updated Date: Fri, 30 Mar 2018 (13:54 IST)
ಚನ್ನಪಟ್ಟಣ, ಮದ್ದೂರು ಕ್ಷೇತ್ರಗಳಿಂದ ಸ್ಪರ್ಧೆಗೆ ಸಿ.ಪಿ. ಯೋಗೀಶ್ವರ್ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೊತೆ ಮಾತುಕತೆ ನಡೆಸಲಾಗುತ್ತದೆ.
ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಅಮಿತ್ ಷಾ ಜೊತೆ ಚರ್ಚಿಸುವುದಾಗಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಚನ್ನಪಟ್ಟಣದಿಂದ ಸ್ಪರ್ಧೆ ಮಾಡಿದರೆ ತಮಗೆ ಕಷ್ಟವಾಗಬಹುದೆಂಬ ಚಿಂತನೆಯಿಂದ ಮದ್ದೂರು, ಚನ್ನಪಟ್ಟಣ ಎರಡು ಕ್ಷೇತ್ರಗಳತ್ತ ಮುಖ ಮಾಡಿದ್ದಾರೆ.
ಆ ಮೂಲಕ ಅದೃಷ್ಟ ಪರೀಕ್ಷೆಗಿಳಿಯಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಮಂಡ್ಯಕ್ಕೆ ಅಮಿತ್ ಷಾ ಬಂದಾಗ ಮಾತುಕತೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತದೆ.