ಹಲವೆಡೆ ಡಿ. 4ರವರೆಗೆ ವ್ಯಾಪಕ ಮಳೆ!

Webdunia
ಬುಧವಾರ, 1 ಡಿಸೆಂಬರ್ 2021 (09:08 IST)
ಇಂದಿನಿಂದ 4 ದಿನ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಇಂದಿನಿಂದ ಡಿ. 4ರವರೆಗೆ ಮಳೆಯಾಗಲಿದೆ.
ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಡಿ.2ರಂದು ಹೊರತುಪಡಿಸಿ ಉಳಿದ ದಿನಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ನಿನ್ನೆ ಸಂಜೆಯಿಂದ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಂಗಳೂರು, ಪುತ್ತೂರು, ಬಂಟ್ವಾಳ, ಸುಳ್ಯ, ವಿಟ್ಲ ಸುತ್ತಮುತ್ತಲೂ ಮಳೆ ಹೆಚ್ಚಾಗಿದೆ. ಕರಾವಳಿ ತೀರದಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ಕನ್ಯಾಕುಮಾರಿ ಮತ್ತು ತಿರುನಲ್ವೇಲಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಎಂದೂ ವಿರೋಧ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿಯ ನಾಯಕರ ಮೇಲೆ ಯಾಕೆ ಇಡಿ ದಾಳಿ ಮಾಡಲ್ಲ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Video: ಪ್ರಧಾನಿ ಮೋದಿ ಒಬ್ಬ ಟೆರರಿಸ್ಟ್ ಎಂದು ನಾಲಿಗೆ ಹರಿಬಿಟ್ಟ ಮಲ್ಲಿಕಾರ್ಜುನ ಖರ್ಗೆ

ಮೇಕೆ ದಾಟಿಗೆ ತಡೆ ಎಂಬ ಪ್ರಣಾಳಿಕೆ ಮಾಡಿದ ಡಿಎಂಕೆ ಪರವಾಗಿ ಕಾಂಗ್ರೆಸ್ ನಾಯಕ ಪ್ರಚಾರ: ನಾಚಿಕೆಯಾಗಬೇಕು ಎಂದ ಜೆಡಿಎಸ್

ಹೈಕೋರ್ಟ್‌ನಲ್ಲಿ ಸರ್ಕಾರಕ್ಕೆ ಮತ್ತೆ ಹಿನ್ನಡೆ: ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕವನ್ನೇ ನೀಡಲು ನಿರ್ದೇಶನ

ಮುಂದಿನ ಸುದ್ದಿ
Show comments