Publish Date: Thu, 23 Dec 2021 (08:46 IST)
Updated Date: Thu, 23 Dec 2021 (08:49 IST)
ಬೆಂಗಳೂರು : ಎಂಇಎಸ್ ದಬ್ಬಾಳಿಕೆ, ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಮಾಡಿ ಹೋರಾಟಗಾರ ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ ಮಾಡಿದ್ದಾರೆ.
ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಕರ್ನಾಟಕ ಬಂದ್ ಆಗಲಿದೆ. ತುರ್ತುಸೇವೆಗಳನ್ನು ಹೊರತುಪಡಿಸಿ ಎಲ್ಲ ಕಡೆ ಬಂದ್ ಆಗಬೇಕು. ಪಕ್ಷಾತೀತವಾಗಿ ಎಲ್ಲರೂ ಕರ್ನಾಟಕ ಬಂದ್ ಬೆಂಬಲಿಸಬೇಕು ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.
ಸುಮಾರು 35 ಸಂಘಟನೆಗಳಿಂದ ಬಂದ್‌ಗೆ ಬೆಂಬಲ ಸಿಗುವ ಸಾಧ್ಯತೆ ಇದೆ. ಲಾರಿ ಮಾಲೀಕರ ಸಂಘ, ಆಟೋ ಚಾಲಕರು, ಟ್ಯಾಕ್ಸಿ ಮಾಲೀಕರು, ಹೋಟೆಲ್ ಮಾಲೀಕರು, ಶಿಕ್ಷಣ ಸಂಸ್ಥೆ, ದಲಿತ ಸಂಘರ್ಷ ಸಮಿತಿ, ಕೈಗಾರಿಕಾ, ಬೀದಿಬದಿ ವ್ಯಾಪರಿಗಳು, ಸಾರಿಗೆ ನೌಕರರು, ಸಿನಿಮಾ, ಅಂಗಡಿ ಮಾಲೀಕರು, ಗಾರ್ಮೆಂಟ್ಸ್ ನೌಕರರು, ಸರ್ಕಾರಿ ನೌಕರರು, ಅಖಿಲ ಭಾರತ ಚಾಲಕರ ಸಂಘ, ಕಟ್ಟಡ ಕಾರ್ಮಿಕರ ಸಂಘ ಬೆಂಬಲಕ್ಕೆ ಸಾಥ್ ನೀಡುವ ಸಾಧ್ಯತೆ ಹೆಚ್ಚಿದೆ.