Select Your Language

Notifications

webdunia
webdunia
webdunia
Friday, 11 April 2025
webdunia

ಕೋವಿಡ್ನಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರ ವಿತರಣೆಗೆ ಡೇಟ್ ಫಿಕ್ಸ್

ಕೋವಿಡ್
ಬೆಂಗಳೂರು , ಶುಕ್ರವಾರ, 24 ಡಿಸೆಂಬರ್ 2021 (15:41 IST)
ಬೆಂಗಳೂರು : ಜಿಲ್ಲಾಡಳಿತ ಹಾಗೂ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ವತಿಯಿಂದ,

 ಕೋವಿಡ್ ಸೋಂಕಿನಿಂದ ಮೃತಪಟ್ಟವರ ವಾರಸುದಾರರು ಹಾಗೂ ಕುಟುಂಬಸ್ಥರಿಗೆ ಪರಿಹಾರ ಧನ ವಿತರಣಾ ಕಾರ್ಯಕ್ರಮವನ್ನು ಡಿಸೆಂಬರ್ 27 ಬೆಳಗ್ಗೆ 11:00 ಗಂಟೆಗೆ ನ್ಯಾಷನಲ್ ಕಾಲೇಜು ಮೈದಾನ, ಕೆ.ಆರ್.ರಸ್ತೆ, ಬಸವನಗುಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ. ಅವರೊಂದಿಗೆ ಕೇಂದ್ರ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ,

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಉದಯ್.ಜಿ.ಗರುಡಾಚಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಂದಾಯ ಸಚಿವ ಆರ್.ಅಶೋಕ್ ಘನ ಉಪಸ್ಥಿತಿಯಲ್ಲಿ ಇರುತ್ತಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೆಟ್ರೋ ಪಿಕ್ನಿಕ್ ಹೊಸ ಟಿಕೆಟ್