ಬೆಂಗಳೂರು (ಜು.21): ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದ್ದು, ಬರುವ ಆ.10ಕ್ಕೆ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
• ಎಸ್ಎಸ್ಎಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದ್ದು, ಬರುವ ಆ.10ಕ್ಕೆ ಪರೀಕ್ಷೆ ಫಲಿತಾಂಶ
• ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಗುರುವಾರ ಭಾಷಾ ಪತ್ರಿಕೆಗಳ ಪರೀಕ್ಷೆ ಇದೆ. ಅದು ಸಹ ಯಾವುದೇ ಸಮಸ್ಯೆ ಇಲ್ಲದೇ ನಡೆಯಲಿದೆ ಎಂಬ ವಿಶ್ವಾಸ ಇದೆ ಎಂದರು.
SSLC ಮೊದಲ ದಿನ ಸುಸೂತ್ರ: 99.67% ವಿದ್ಯಾರ್ಥಿಗಳು ಪರೀಕ್ಷೆಗೆ!
ಸೋಮವಾರ ಮೊದಲ ಪತ್ರಿಕೆ ಪರೀಕ್ಷೆ ಪೂರ್ಣಗೊಂಡಿದೆ. ಈ ವೇಳೆ ಯಾವುದೇ ಸಮಸ್ಯೆಯಾಗಿಲ್ಲ. ಇದು ಕೇವಲ ಶಿಕ್ಷಣ ಇಲಾಖೆಯ ಪರೀಕ್ಷೆಯಾಗಿರಲಿಲ್ಲ. ಸಮಾಜದ ಪರೀಕ್ಷೆಯಾಗಿದೆ. 58 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿವೆ. ಆ ಮಕ್ಕಳು ಬೇರೆ ಬೇರೆ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದರು