ಬಂಡಾಯದ ಬಿಸಿ ನಡುವೆಯೇ ಡಿಕೆಶಿ-ಪರಮೇಶ್ವರ್ ದಿಡೀರ್ ಭೇಟಿ

Webdunia
ಶುಕ್ರವಾರ, 14 ಸೆಪ್ಟಂಬರ್ 2018 (10:08 IST)
ಬೆಂಗಳೂರು: ಜಾರಕಿಹೊಳಿ ಸಹೋದರರ ಬಂಡಾಯ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಹೆಸರು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರ ಜತೆ ಮಾತುಕತೆ ನಡೆಸುತ್ತಿದ್ದಾರೆ.

ಸುಖಾಸುಮ್ಮನೇ ಜಾರಕಿಹೊಳಿ ಬಂಡಾಯ ವಿಚಾರದಲ್ಲಿ ತಮ್ಮ ಹೆಸರು ಎಳೆದುತರಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ಹಿನ್ನಲೆಯಲ್ಲಿ ಡಿಸಿಎಂ ಪರಮೇಶ್ವರ್ ಸಚಿವ ಡಿಕೆಶಿ ಅವರ ಸದಾಶಿವ ನಗರದ ನಿವಾಸಕ್ಕೆ ಆಗಮಿಸಿ ದಿಡೀರ್ ಮಾತುಕತೆ ನಡೆಸುತ್ತಿದ್ದಾರೆ.

ನಿನ್ನೆಯಷ್ಟೇ ಪರಮೇಶ್ವರ್ ಜಾರಕಿಹೊಳಿ ಸಹೋದರರ ವಿಚಾರದಲ್ಲಿ ಡಿಕೆ ಶಿವಕುಮಾರ್ ಪಾತ್ರವಿಲ್ಲ. ಅವರು ಬೆಳಗಾವಿ ಕಾಂಗ್ರೆಸ್ ವಿಚಾರದಲ್ಲಿ ತಲೆ ಹಾಕಿಲ್ಲ ಎಂದು ಸಮಜಾಯಿಷಿ ನೀಡಿದ್ದರು. ಇದರ ನಡುವೆಯೇ ಇಂದು ಸ್ವತಃ ಡಿಕೆಶಿ ನಿವಾಸಕ್ಕೆ ಪರಮೇಶ್ವರ್ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ವಿಚಾರದಲ್ಲಿ ಚರ್ಚೆಗೆ ಆಹ್ವಾನಿಸಿದ ಎಚ್‌ಡಿಕೆಗೆ ಶಿವಕುಮಾರ್ ತಿರುಗೇಟು

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕರ ವಿಚಾರ: ಸ್ಪಷ್ಟನೆ ಕೊಟ್ಟ ಸಿದ್ದರಾಮಯ್ಯ

ಬಾಂಗ್ಲಾದೇಶ: ಶರಿಯತ್‌ಪುರ ಬಾಂಬ್ ಸ್ಫೋಟದಲ್ಲಿ ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಜಮೀನಿನಲ್ಲಿ ಸಿಕ್ಕ ನಿಧಿ ಸರ್ಕಾರಕ್ಕೆ ನೀಡಿ ಪ್ರಾಮಾಣಿಕತೆ ಮೆರೆದು ಬೀದಿಗೆ ಬಿದ್ದ ಕುಟುಂಬ: ಯಾಕೆ ಹೀಗಾಯ್ತು

ಮುಟ್ಟಿನ ಕಾಲದ ನೋವು ತಾಳಲಾರದೆ ನೇಣಿಗೆ ಶರಣಾದ ಯುವತಿ

ಮುಂದಿನ ಸುದ್ದಿ
Show comments