ಕರ್ನಾಟಕಕ್ಕೆ ಕಾಲಿಟ್ಟ ಡೆಡ್ಲಿ ವೈರಸ್!

Webdunia
ಗುರುವಾರ, 2 ಡಿಸೆಂಬರ್ 2021 (17:20 IST)
ಬೆಂಗಳೂರು : ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿರುವ ಕೊರೊನಾ ವೈರಸ್ ಹೊಸ ರೂಪಾಂತರ ಓಮಿಕ್ರಾನ್ ಈಗ ಕರ್ನಾಟಕಕ್ಕೂ ಕಾಲಿಟ್ಟಿದ್ದು, ಆತಂಕ ಮೂಡಿಸಿದೆ.
ಬೆಂಗಳೂರಿನ ಇಬ್ಬರಿಗೆ ಕೊರೊನಾ ವೈರಸ್ನ ಹೊಸ ರೂಪಾಂತರ ಓಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ. ಭಾರತದಲ್ಲೇ ಮೊದಲ ಬಾರಿಗೆ ಓಮಿಕ್ರಾನ್ ಪತ್ತೆಯಾಗಿರುವ ರಾಜ್ಯ ಕರ್ನಾಟಕವಾಗಿದೆ.
ಬೆಂಗಳೂರಿನವರಾದ ಇವರು ದಕ್ಷಿಣ ಆಫ್ರಿಕಾದಿಂದ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ. ಇವರು ನವೆಂಬರ್ ಮೊದಲ ವಾರ ಬೆಂಗಳೂರಿಗೆ ಬಂದಿದ್ದರು. ಓಮಿಕ್ರಾನ್ ಪೀಡಿತರಲ್ಲಿ ಒಬ್ಬ ಬೊಮ್ಮನಹಳ್ಳಿ ಮೂಲದ ನಿವಾಸಿ ಎಂದು ತಿಳಿದುಬಂದಿದೆ. 
ಇವರಿಬ್ಬರ ಸಂಪರ್ಕದಲ್ಲಿದ್ದವರನ್ನು ಗುರುತಿಸಲಾಗಿದ್ದು, ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಹೊಸ ರೂಪಾಂತರಿ ಪತ್ತೆಯಾಗಿರುವುದರಿಂದ ಸರ್ಕಾರ ಅಲರ್ಟ್ ಆಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ಕರೆಯುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಅಲ್ಲದೇ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಸಲಹೆ ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗಿ ಅಧಿಕಾರವಹಿಸಿಕೊಳ್ಳುತ್ತಿದ್ದ ಹಾಗೇ ಮನೆ ಬಳಿ ನಿಂಬೆಹಣ್ಣು, ಸತ್ತ ಕೋಳಿ ಪತ್ತೆ: ಇದೆಲ್ಲ ಅದೆ ಎಂದಾ ಜನತೆ

ಮುಂಬೈ ಸಂಗೀತ ಕಚೇರಿಯಲ್ಲಿ ಒಬ್ಬ ವ್ಯಕ್ತಿ ಸಾವು, ಮಹಿಳೆ ಆಸ್ಪತ್ರೆಗೆ ದಾಖಲು

ಯಾವ ಕಾರಣಕ್ಕೂ ಜಮೀರ್ ಇಲ್ಲದ ಸರ್ಕಾರ ಆಗಲ್ಲ: ಕೋಡಿಮಠದ ಸ್ವಾಮೀಜಿ ಭವಿಷ್ಯ

ಸ್ನೇಹಿತರಂತೆ ಮನೆಹೊಕ್ಕು ಪ್ರೊಫೆಸರ್‌ ಅನ್ನೇ ಮುಗಿಸಿದ ದಂಪತಿಗಳು, ಇವರ ಮಾಸ್ಟರ್ ಪ್ಲಾನ್ ಕೇಳಿದ್ರೆ ಶಾಕ್

ಮೋದಿ ಸರ್ಕಾರಕ್ಕೆ ಮೂರು ಪ್ರಶ್ನೆ ಮುಂದಿಟ್ಟ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments