ಬೆಂಗಳೂರು : ಇಂಗ್ಲೆಂಡಿನ ರಾಣಿ 2ನೇ ಎಲಿಜಬೆತ್ ನಿಧನರಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಸೆಪ್ಟೆಂಬರ್ 11 ರಂದು ಕರ್ನಾಟಕದಲ್ಲೂ ಶೋಕಾಚರಣೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
									
			
			 
 			
 
 			
			                     
							
							
			        							
								
																	ಸೆ.11 ರಂದು ಶೋಕಾಚರಣೆ ಹಿನ್ನೆಲೆಯಲ್ಲಿ ಯಾವುದೇ ಅಧಿಕೃತ ಮನೋರಂಜನಾ ಕಾರ್ಯಕ್ರಮ ಇರುವುದಿಲ್ಲ.
ನಿಯಮಿತವಾಗಿ ಎಲ್ಲಾ ಸರ್ಕಾರಿ ಇಲಾಖೆಯ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ.