Webdunia - Bharat's app for daily news and videos

Install App

ಬಜೆಟ್ ಅನುಷ್ಠಾನದಲ್ಲಿ ವಿಳಂಬ ಸಹಿಸಲ್ಲ : ಸಿಎಂ

Webdunia
ಬುಧವಾರ, 11 ಮೇ 2022 (13:20 IST)
ಬೆಂಗಳೂರು : ನನ್ನ ಸರ್ಕಾರ ಬಜೆಟ್ ಘೋಷಿತ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಧೋರಣೆ ಸಹಿಸುವುದಿಲ್ಲ.

ನೀವೆಲ್ಲರೂ ನನ್ನ (ರಡಾರ್) ಕಣ್ಗಾವಲಿನಲ್ಲಿ ಇದ್ದೀರಿ. ನಿಮ್ಮೆಲ್ಲರನ್ನು ನಾನು ಗಮನಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬೆಂಗಳೂರಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಸಿಇಒಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನೀವೆಲ್ಲರೂ ಯುವಕರಿದ್ದೀರಿ.

ಒಳ್ಳೆಯ ಕೆಲಸ ಮಾಡಲು ದೇವರು ನಿಮಗೆ ಇದೊಂದು ಅವಕಾಶ ನೀಡಿದ್ದಾನೆ. ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು. 
ಬಡವರ, ದೀನ ದಲಿತರ ಪರವಾದ ಕೆಲಸಗಳನ್ನು ಮಾಡಿ. ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣದಲ್ಲಿ ನಿಮ್ಮ ಕೊಡುಗೆಯನ್ನು ನೀಡಿ. ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡೋಣ. ನಾನು ನಿಮ್ಮ ಜೊತೆ ಇದ್ದೇನೆ. ಆದರೆ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮತ್ತು ಭ್ರಷ್ಟಾಚಾರವನ್ನು ಎಂದೂ ಸಹಿಸುವುದಿಲ್ಲ.

ಅದಕ್ಕೆ ಅವಕಾಶವನ್ನೂ ಮಾಡಿಕೊಡುವುದಿಲ್ಲ. ಈ ಮಾತುಗಳನ್ನು ನೀವು ಸ್ಪಷ್ಟವಾಗಿ ನೆನಪಿನಲ್ಲಿಟ್ಟುಕೊಂಡು ಕೆಲಸ ಮಾಡಿ ಎಂದು ಸಿಎಂ ಸೂಚನೆ ನೀಡಿದರು.

ವ್ಯವಸ್ಥೆ ಮೇಲಿನ ವಿಶ್ವಾಸವನ್ನು ಪುನರ್ ಸ್ಥಾಪಿಸೋಣ. ನಿಮ್ಮ ಕಾರ್ಯವೈಖರಿಯನ್ನು ಗಮನಿಸಲಾಗುತ್ತದೆ. ಸಾರ್ವಜನಿಕರು ತರುವ ಅರ್ಜಿಗಳಿಗೆ ಪರಿಹಾರ ಕೊಡುವ ಕೆಲಸವಾಗಬೇಕು. ನಿಮ್ಮ ಕಾರ್ಯದಲ್ಲಿ ನಿಖರತೆ ಇರಲಿ. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಸೂಚಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments