Select Your Language

Notifications

webdunia
webdunia
webdunia
webdunia

1ರಿಂದ 5ನೇ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಪ್ಲ್ಯಾನ್

1ರಿಂದ 5ನೇ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಪ್ಲ್ಯಾನ್
ಬೆಂಗಳೂರು , ಸೋಮವಾರ, 18 ಅಕ್ಟೋಬರ್ 2021 (08:29 IST)
ಇಂದಿನಿಂದ 6 ನೆಯ ತರಗತಿಯಿಂದ 10ನೆ ತರಗತಿಯ ಶಾಲಾ ಮಕ್ಕಳು ರಾಜ್ಯಾದ್ಯಂತ ಇಂದಿನಿಂದ ಶಾಲೆಗಳಿಗೆ ಪೂರ್ವಾವಧಿಗೆ ಹಾಜರಾಗಲಿದ್ದಾರೆ.

ಈ ಮಧ್ಯೆ, 1ರಿಂದ 5ನೇ ತರಗತಿ ಶಾಲೆ ಆರಂಭ ಬಗ್ಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಕೊವಿಡ್ ತಾಂತ್ರಿಕ ಸಲಹಾ ಸಮಿತಿ, ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಜತೆ ಸಿಎಂ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಶಾಲೆ ಆರಂಭ ದಿನಾಂಕ ಹೊರಬೀಳುವ ಸಾಧ್ಯತೆಯಿದೆ.
ವಿಶ್ವಸನೀಯ ಮೂಲಗಳ ಪ್ರಕಾರ ಅಕ್ಟೋಬರ್ 21ರಿಂದ ಕಿರಿಯ ಪ್ರಾಥಮಿಕ ಶಾಲೆ ಆರಂಭಿಸಲು ಚೀಮತನೆ ನಡದಿದ್ದು, ರಾಜ್ಯ ಶಿಕ್ಷಣ ಇಲಾಖೆ ಶಾಲೆ ಆರಂಭಿಸಲು ಸಿದ್ಧವಾಗಿದೆ ಎಂದು ತಿಳಿದುಬಂದಿದೆ. ಇನ್ನು ಅಕ್ಟೋಬರ್ 21ರಿಂದ ಶಾಲೆಗಳಲ್ಲಿ ಬಿಸಿಯೂಟ ವಿತರಣೆಯೂ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಈಗಾಗಲೇ ಪ್ರಕಟಿಸಿದ್ದಾರೆ. ಹೀಗಾಗಿ ಅ.21ರಿಂದಲೇ ಶಾಲೆ ಆರಂಭ ಮಾಡಲು ಪ್ಲ್ಯಾನ್ ಮಾಡಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ಶಾಲೆಗಳಲ್ಲಿ ಪೂರ್ಣಾವಧಿಗೆ ಮಕ್ಕಳ ಹಾಜರಾತಿ