ಬೆಂಗಳೂರು : ತುರ್ತಾಗಿ ಹೋಗುವ ಸಮಯದಲ್ಲಿ ಟ್ರಾಫಿಕ್ ಪೊಲೀಸರು ವಾಹನ ಸವಾರರನ್ನು ತಡೆದು ನಿಲ್ಲಿಸುವುದರಿಂದ ಸವಾರರು ಕಿರಿಕಿರಿಯನ್ನು ಅನುಭವಿಸುತ್ತಾರೆ.
ಈ ಸಂಬಂಧ ಜನರು ಟ್ರಾಫಿಕ್ ಪೊಲೀಸರ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಇದರ ಕುರಿತಾಗಿ ವಾಹನ ಸವಾರರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ.
ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಿಸುವುದು ಕಂಡುಬಂದರೆ ಮಾತ್ರ ತಡೆಯಿರಿ. ಇಲ್ಲದಿದ್ರೆ ವಾಹನ ಸವಾರರನ್ನು ತಡೆಯಬೇಡಿ ಎಂದು ಡಿಜಿ ಐಜಿಪಿ ಅಲೋಕ್ ಮೋಹನ್ ಸಂಚಾರ ನಿಯಮಗಳಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ.
ಪೀಕ್ ಅವರ್ ಟ್ರಾಫಿಕ್ ಪ್ರಾರಂಭವಾಗುವ ಮೊದಲೇ ಸಂಚಾರಿ ಪೊಲೀಸರು ಆಯಾ ಸ್ಥಳಗಳಲ್ಲಿ ನಿಯೋಜಿಸಿಕೊಳ್ಳಬೇಕು. ಸಂಚಾರಿ ಪೊಲೀಸ್ ಸಿಬ್ಬಂದಿ ದಟ್ಟಣೆಯ ಸಮಯಕ್ಕಿಂತ ಮೊದಲು ತಮ್ಮ ಗೊತ್ತುಪಡಿಸಿದ ಪ್ರದೇಶಗಳಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು. ಈ ಹೊಸ ಕ್ರಮವು ರಿಯಲ್ ಟೈಮ್ನಲ್ಲಿ ಸಂಚಾರ ದಟ್ಟಣೆಯನ್ನು ತಡೆಗಟ್ಟಲು ಸಹಾಯ ಮಾಡಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.