Select Your Language

Notifications

webdunia
webdunia
webdunia
webdunia

ಬಾರಿಸು ಕನ್ನಡ ಡಿಂಡಿಮವ...!

ಬಾರಿಸು ಕನ್ನಡ ಡಿಂಡಿಮವ...!
ಬೆಂಗಳೂರು , ಸೋಮವಾರ, 1 ನವೆಂಬರ್ 2021 (07:28 IST)
ಬೆಂಗಳೂರು : ಈ ಬಾರಿಯ (2020-21ನೇ ಸಾಲಿನ) ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ. 66ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆ 66 ಸಾಧಕರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
10 ಸಂಘ ಸಂಸ್ಥೆಗೆ ಅಮೃತ ಮಹೋತ್ಸವದ ರಾಜ್ಯ ಪ್ರಶಸ್ತಿ ಘೋಷಿಸಲಾಗಿದೆ. ಆಡಳಿತ ಕ್ಷೇತ್ರದಲ್ಲಿ ಹೆಚ್.ಆರ್. ಕಸ್ತೂರಿ ರಂಗನ್ಗೆ ಪ್ರಶಸ್ತಿ, ಹಾವೇರಿ ಯೋಧ ನವೀನ್ ನಾಗಪ್ಪಗೆ ಹಾಗೂ ನಾಲ್ವರಿಗೆ ಹೊರನಾಡು ಕನ್ನಡಿಗರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಇಂದು ಸಂಜೆ 6 ಗಂಟೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಸಚಿವ ಸುನಿಲ್ ಕುಮಾರ್ ಸೇರಿದಂತೆ ಹಲವರು ಭಾಗಿ ಆಗಲಿದ್ದಾರೆ. 66 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ನಡೆಯಲಿದೆ. 10 ಸಂಘ ಸಂಸ್ಥೆಗೆ ಅಮೃತ ಮಹೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ