Select Your Language

Notifications

webdunia
webdunia
webdunia
webdunia

ಸಚಿವ ಸ್ಥಾನಕ್ಕಾಗಿ ಕಾಯುತ್ತಿದ್ದಾರೆಯೇ ಡಿಕೆ ಶಿವಕುಮಾರ್?

ಸಚಿವ ಸ್ಥಾನಕ್ಕಾಗಿ ಕಾಯುತ್ತಿದ್ದಾರೆಯೇ ಡಿಕೆ ಶಿವಕುಮಾರ್?
ಬೆಂಗಳೂರು , ಶನಿವಾರ, 26 ಮೇ 2018 (08:47 IST)
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬರಲು ಪ್ರಮುಖ ಪಾತ್ರ ವಹಿಸಿದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಡಿಕೆ ಶಿವಕುಮಾರ್ ಬಗ್ಗೆ ಹೈಕಮಾಂಡ್ ಕೂಡಾ ಹೊಗಳಿದೆ.

ಆದರೆ ಉಪ ಮುಖ್ಯಮಂತ್ರಿ ಸ್ಥಾನ ಸಿಗದೇ ಡಿಕೆಶಿ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿತ್ತು. ನಿನ್ನೆ ವಿಶ್ವಾಸ ಮತ ಯಾಚನೆ ದಿನವೂ ಡಿಕೆಶಿ ಬೇಕೆಂದೇ ತಡವಾಗಿ ವಿಧಾನಸೌಧಕ್ಕೆ ಬಂದರು ಎಂಬ ಆರೋಪವಿತ್ತು. ಅಂತೂ ಡಿಕೆಶಿ ತಮ್ಮ ಪರಿಶ್ರಮಕ್ಕೆ ದೊಡ್ಡ ಪ್ರತಿಫಲವೇ ಸಿಗಬೇಕೆಂದು ಹಠ ಹಿಡಿದಿದ್ದಾರೆ ಎಂಬ ಸುದ್ದಿ ಪಕ್ಷದ ವಲಯದಲ್ಲಿ ಓಡಾಡುತ್ತಿದೆ.

ಈ ಬಗ್ಗೆ ವಿಶ್ವಾಸಮತ ಪ್ರಕ್ರಿಯೆ ಬಳಿಕ ಸುದ್ದಿಗಾರರು ಕೇಳಿದಾಗ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ‘ಸಚಿವ ಸ್ಥಾನ ನಿರ್ಧರಿಸುವುದು ನಾನಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ. ಹೈಕಮಾಂಡ್ ನಿರ್ಧಾರಕ್ಕೆ ತಾವು ಬದ್ಧ’ ಎಂದು ಪುನರುಚ್ಛರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಭಿನಂದಿಸಲು ಬಂದ ಜಮೀರ್ ಅಹಮ್ಮದ್ ಗೆ ಸಿಎಂ ಕುಮಾರಸ್ವಾಮಿ ಮಾಡಿದ್ದೇನು ಗೊತ್ತಾ?!