Select Your Language

Notifications

webdunia
webdunia
webdunia
webdunia

ಸರ್ಕಾರಿ ಆಸ್ಪತ್ರೆ, ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಆವರಣದಲ್ಲಿರುವ ಮೆಡಿಕಪ್ ಶಾಪ್ ಗೆ ಖಡಕ್ ಎಚ್ಚರಿಕೆ ನೀಡಿದ ಡಿಕೆಶಿ

ಸರ್ಕಾರಿ ಆಸ್ಪತ್ರೆ, ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಆವರಣದಲ್ಲಿರುವ ಮೆಡಿಕಪ್ ಶಾಪ್ ಗೆ ಖಡಕ್ ಎಚ್ಚರಿಕೆ ನೀಡಿದ ಡಿಕೆಶಿ
ಬೆಂಗಳೂರು , ಶುಕ್ರವಾರ, 28 ಸೆಪ್ಟಂಬರ್ 2018 (11:21 IST)
ಬೆಂಗಳೂರು : ಆಲ್‌ ಇಂಡಿಯಾ ಆರ್ಗನೈಜೇಷನ್‌ ಆಫ್‌ ಕೆಮಿಸ್ಟ್‌ ಆಯಂಡ್‌ ಡ್ರಗಿಸ್ಟ್‌ ಅಸೋಸಿಯೇಷನ್‌ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಆವರಣದಲ್ಲಿರುವ ಔಷಧ ವ್ಯಾಪಾರ ಮಳಿಗೆಗಳಿಗೆ ವೈದ್ಯಕೀಯ ಶಿಕ್ಷಣ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಟ್ವಿಟರ್ ಮೂಲಕ ಸೂಚನೆವೊಂದನ್ನು ನೀಡಿದ್ದಾರೆ.


ಕೇಂದ್ರ ಸರಕಾರ ಜಾರಿಗೊಳಿಸಲು ಮುಂದಾಗಿರುವ ಇ-ಫಾರ್ಮಸಿ ವ್ಯವಸ್ಥೆ ವಿರೋಧಿಸಿ ಆಲ್‌ ಇಂಡಿಯಾ ಆರ್ಗನೈಜೇಷನ್‌ ಆಫ್‌ ಕೆಮಿಸ್ಟ್‌ ಆಯಂಡ್‌ ಡ್ರಗಿಸ್ಟ್‌ ಅಸೋಸಿಯೇಷನ್‌ ಮುಷ್ಕರಕ್ಕೆ ಕರೆ ನೀಡಿದೆ.


ಈ ಹಿನ್ನಲೆಯಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಟ್ವಿಟರ್ ಮೂಲಕ ಸರ್ಕಾರಿ ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಆವರಣದಲ್ಲಿರುವ ಔಷಧ ವ್ಯಾಪಾರ ಮಳಿಗೆಗಳು ಇಂದು ಎಂದಿನಂತೆ ಕಾರ್ಯನಿರ್ಹಹಿಸಬೇಕು. ಒಂದು ವೇಳೆ ಯಾವುದಾದರೂ ಮಳಿಗೆಗಳು ಬಂದ್​ನಲ್ಲಿ ಪಾಲ್ಗೊಂಡಿದ್ದೇ ಆದಲ್ಲಿ ಅಂತಹ ಮಳಿಗೆಗಳ ಪರವಾನಗಿ ರದ್ದುಪಡಿಸಲಾಗುವುದು. ಸರ್ಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಆವರಣದಿಂದ ತೆರವು ಮಾಡಿಸಲಾಗುವುದು ಎಂದು ಟ್ವೀಟ್ ಮಾಡಿ ಎಚ್ಚರಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಟಾಯ್ಲೆಟ್ ಹೋಗಿದ್ದ ಮಹಿಳೆಯ ದೃಶ್ಯ ಸೆರೆ ಹಿಡಿದ ಹೋಟೆಲ್ ಸಿಬ್ಬಂದಿ! ಮುಂದೇನಾಯ್ತು?