Webdunia - Bharat's app for daily news and videos

Install App

ಮೇಕೆದಾಟು ನಿರ್ಮಾಣಕ್ಕೆ ಅನುಮತಿ ನೀಡಲ್ಲ : ಸರ್ಕಾರ

Webdunia
ಭಾನುವಾರ, 24 ಜುಲೈ 2022 (07:38 IST)
ನವದೆಹಲಿ : ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಲು ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಸುಪ್ರೀಂಕೋರ್ಟ್ಗೆ ತಮಿಳುನಾಡು ಸರ್ಕಾರ ಹೇಳಿದೆ.
 
ಸೋಮವಾರ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ಹಿನ್ನೆಲೆ ಪ್ರಕರಣ ಸಂಬಂಧ ವಿವರಣೆ ನೀಡುವಂತೆ ಸುಪ್ರೀಂಕೋರ್ಟ್ ಕಳೆದ ವಿಚಾರಣೆ ವೇಳೆ ನೋಟಿಸ್ ಜಾರಿ ಮಾಡಿತ್ತು. ಈ ನೋಟಿಸ್ ಗೆ ಉತ್ತರಿಸಿರುವ ತಮಿಳುನಾಡು ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣ ಬಗ್ಗೆ ನಿರ್ಧರಿಸುವ ಯಾವುದೇ ಅಧಿಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಇಲ್ಲ ಎಂದು ಹೇಳಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸುಪ್ರೀಂಕೋರ್ಟ್ ನೀಡಿದ ಕಾರ್ಯ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು, ನೀರು ಹಂಚಿಕೆ ಬಗ್ಗೆ ಪರಿಶೀಲನೆ ಮಾಡಬೇಕು. ಈ ಪ್ರಾಧಿಕಾರಕ್ಕೆ ಅಣೆಕಟ್ಟು ನಿರ್ಮಾಣ ಮಾಡುವ ಬಗ್ಗೆ ನಿರ್ಧರಿಸುವ ಅಧಿಕಾರ ಇಲ್ಲ. ಹೀಗಾಗಿ ತನ್ನ ಸಭೆಯಲ್ಲಿ ಅಣೆಕಟ್ಟು ನಿರ್ಮಾಣದ ಬಗ್ಗೆ ಅಥವಾ ಮೇಕೆದಾಟು ಡಿಪಿಆರ್ ಬಗ್ಗೆ ಚರ್ಚೆ ಮಾಡಬಾರದು ಎಂದು ಹೇಳಿದೆ.

ಕಳೆದ ಒಂಭತ್ತು ವರ್ಷದಲ್ಲಿ ಐದು ವರ್ಷ ಕರ್ನಾಟಕ ಸಮರ್ಪಕ ನೀರು ಹರಿಸದೇ ತಮಿಳುನಾಡಿಗೆ ಮೋಸ ಮಾಡಿದೆ. ಮೇಕೆದಾಟು ಅಣೆಕಟ್ಟು ನಿರ್ಮಾಣದಿಂದ ಕೆಳ ಹಂತದ ರಾಜ್ಯಗಳಿಗೆ ತೊಂದರೆಯಾಗಲಿದೆ. ಹೀಗಾಗಿ ಅಣೆಕಟ್ಟು ನಿರ್ಮಾಣ ಮಾಡಬಾರದು ಎಂದು ತನ್ನ ಅಫಿಡೆವಿಟ್ ನಲ್ಲಿ ಉಲ್ಲೇಖಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

₹2 ವೈದ್ಯ ಎಂದೇ ಖ್ಯಾತಿ ಪಡೆದಿದ್ದ ಕೇರಳದ ಡಾ. ಎಕೆ ರೈರು ಗೋಪಾಲ್ ಇನ್ನಿಲ್ಲ

ತನ್ನ ಸ್ಥಿತಿ ನೆನೆದು ಜೈಲಿನಲ್ಲಿ ಖೈದಿ ಪ್ರಜ್ವಲ್ ರೇವಣ್ಣ ಕಣ್ಣೀರು, ಕೈದಿ ನಂಬರ್‌ ನೀಡಿದ್ಮೇಲೆ ಫುಲ್ ಸೈಲೆಂಟ್‌

77ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿದ್ದರಾಮಯ್ಯ: ಗಮನ ಸೆಳೆಯುತ್ತಿದೆ ಡಿಕೆ ಶಿವಕುಮಾರ್ ಶುಭಾಶಯ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಲಿಯಾಗಿದ್ದ ದಿವ್ಯಾಂಶಿ ಕಿವಿಯೋಲೆ ಎಗರಿಸಿದ್ದವ ಬಲೆಗೆ, ಆದರೆ ತಾಯಿಯ ಕೋರಿಕೆ ಈಡೇರಲೆ ಇಲ್ಲ

ಮುಂದಿನ ಸುದ್ದಿ
Show comments