Webdunia - Bharat's app for daily news and videos

Install App

ನವರಾತ್ರಿ ವೈಶಿಷ್ಟ್ಯತೆಗಳು ನಿಮಗೆ ತಿಳಿದಿದೆಯೇ?

Webdunia
ಮಂಗಳವಾರ, 4 ಅಕ್ಟೋಬರ್ 2022 (08:50 IST)
ನವರಾತ್ರಿ ಇದು ದೇವಿಯನ್ನು ಆರಾಧಿಸುವ ಹಿಂದೂ ಧರ್ಮದ ಹಬ್ಬ. ಇದನ್ನು ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುತ್ತದೆ.
 
ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ. ನವರಾತ್ರಿಯೆಂದರೆ ಒಂಬತ್ತು (ನವ) ರಾತ್ರಿಗಳು, ದೇವಿಯ ಒಂಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ.

ಹತ್ತನೇಯ ದಿನ 'ವಿಜಯ ದಶಮಿ', ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿ (ಬನ್ನಿ)ಯನ್ನು ವಿನಿಯೋಗ ಮಾಡುವದು ಕರ್ನಾಟಕದ ಆಚರಣೆಯ ಪದ್ಧತಿ. ಇದೇ ದಿನ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿಯ ಮೂರ್ತಿಯ ಮೆರವಣಿಗೆಯು ಮೈಸೂರಿನಲ್ಲಿ ನಡೆಯುತ್ತದೆ. ಮೈಸೂರು ದಸರಾ ಉತ್ಸವವು ಜಗತ್ಪ್ರಸಿದ್ಧಿಯನ್ನು ಪಡೆದಿದೆ. ಈ ಹಬ್ಬವು ಹಿಂದು ಪಂಚಾಂಗದ ಅಶ್ವಯುಜ ಶುದ್ಧ ಪ್ರತಿಪದೆಯ ದಿನ ಪ್ರಾರಂಭವಾಗುತ್ತದೆ.

ನವರಾತ್ರಿಯ ವೈಶಿಷ್ಟ್ಯತೆಗಳು

ನವರಾತ್ರಿ ಒಂಭತ್ತು ರಾತ್ರಿಗಳ ಸಮೂಹ. ಹಿಂದೆ ಐದು ನವರಾತ್ರಿ ಆಚರಣೆ ವಿಶೇಷವಾಗಿತ್ತು. ಈಗ ಎರಡು ನವರಾತ್ರಿ ವಿಶೇಷವಾಗಿದ್ದು, ಆಚರಣೆಯಲ್ಲಿದೆ. ಒಂದು ಶರನ್ನವರಾತ್ರಿ ಇನ್ನೊಂದು ಚೈತ್ರ ನವರಾತ್ರಿ. ಈಗ ನಾವು ಆಚರಿಸುವುದು ಶರನ್ನವರಾತ್ರಿ. ನವರಾತ್ರಿ ಎಲ್ಲ ಜನರೂ ಆಚರಿಸುವ ಒಂದು ವಿಶಿಷ್ಟವಾದ ಹಬ್ಬ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನವರಾತ್ರಿ ಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ.

ಶಕ್ತಿಯ ಆರಾಧನೆ ಈ ಹಬ್ಬದ ವೈಶಿಷ್ಟ್ಯ. ಮಂಗಳವಾರದಿಂದ 9 ದಿನಗಳ ಕಾಲ ಆಚರಿಸುವ ಈ ಪರ್ವಕ್ಕೆ ದುರ್ಗೋತ್ಸವ ಎಂದೂ ಕರೆಯುತ್ತಾರೆ.ವಿಜಯನಗರದ ಅರಸರು ಹಾಗೂ ಮೈಸೂರು ಅರಸರು ಜೈತ್ರಯಾತ್ರೆಯಲ್ಲಿ ಗೆಲುವು ಪಡೆದು ಸಂಭ್ರಮದಿಂದ ನಡೆಸುವ ವಿಶಿಷ್ಟ ಹಬ್ಬ ಎಂಬುದು ಇತಿಹಾಸದ ಉಲ್ಲೇಖ.

ಪುರಾಣದ ಪ್ರಕಾರ ಜಗನ್ಮಾತೆ ರಾಕ್ಷಸರನ್ನು ಸಂಹಾರ ಮಾಡಲು ಒಂದೊಂದು ಅವತಾರವೆತ್ತಿ ರಾಕ್ಷಸರನ್ನು ಸಂಹರಿಸಿ ಲೋಕವನ್ನು ಕಾಪಾಡುತ್ತಾಳೆ. ನವರಾತ್ರಿಯ ಒಂದೊಂದು ದಿನವೂ ಬಹಳ ವಿಶೇಷವಾಗಿ ನಿಲ್ಲುತ್ತದೆ. 9 ದಿನಗಳ ಕಾಲ ಆದಿ ಶಕ್ತಿಯನ್ನು ನವ ವಿಧದಲ್ಲಿ ಪೂಜಿಸಲಾಗುತ್ತದೆ.

1.            ಮೊದಲ ದಿನ ಅಂದರೆ ಪಾಡ್ಯದ ದಿನ ಯೋಗನಿದ್ರಾ ದುರ್ಗಾ ಪೂಜಾ.
2.            ಎರಡನೇ ದಿನ ಆಂದರೆ ಬಿದಿಗೆ ದಿನ ದೇವಜಾತ ದುರ್ಗಾಪೂಜಾ.
3.            ಮೂರನೇ ದಿನ ತದಿಗೆ - ಮಹಿಷಾಸುರ ಮರ್ಧಿನಿ ದುರ್ಗಾಪೂಜಾ.
4.            ನಾಲ್ಕನೇ ದಿನ ಚತುರ್ದಶಿ - ಶೈಲ ಜಾತಾ ದುರ್ಗಾಪೂಜಾ.
5.            ಐದನೇ ದಿನ ಪಂಚಮಿ - ದೂಮೃಹಾ ದುರ್ಗಾಪೂಜಾ.
6.            ಆರನೇ ದಿನ ಶಷ್ಠಿ - ಚಂಡ-ಮುಂಡ ಹಾ ದುರ್ಗಾಪೂಜಾ.
7.            ಏಳನೇ ದಿನ ಸಪ್ತಮಿ - ರಕ್ತ ಬೀಜ ಹಾ ದುರ್ಗಾಪೂಜಾ.
8.            ಎಂಟನೇ ದಿನ ಅಷ್ಟಮಿ - ನಿಶುಂಭ ಹಾ ದುರ್ಗಾಪೂಜಾ.(ದುರ್ಗಾಷ್ಠಮಿ)
9.            ಒಂಭತ್ತನೇ ದಿನ ಮಹಾನವಮಿ -ಶುಂಭ ಹಾ ದುರ್ಗಾಪೂಜಾ.

ಏಳನೇ ದಿನ ಅಂದರೆ ಸಪ್ತಮಿಯಿಂದ ತ್ರಿದಿನ ದುರ್ಗಾಪೂಜಾ ಎಂದೂ ಮಾಡುತ್ತಾರೆ. ಅಂದರೆ ಮಹಾಕಾಳಿ, ಮಹಾಲಕ್ಷ್ಮಿ, ಮಹಾಸರಸ್ವತಿ ಪೂಜೆ ಮಾಡಲಾಗುತ್ತದೆ. ನವರಾತ್ರಿಯಲ್ಲಿ ಸಪ್ತಮಿಗೆ ವಿಶೇಷ ಸ್ಥಾನವಿದೆ.

ಸಪ್ತಮಿಯ ಮೂಲಾನಕ್ಷತ್ರದಂದು ಪುಸ್ತಕ, ಪವಿತ್ರಗ್ರಂಥಗಳನ್ನು, ಚಿನ್ನ, ಬೆಳ್ಳಿ ಪೂಜೆಗಿಡಲಾಗುತ್ತದೆ. ಹಾಗೂ ನವಮಿಯಂದು ಆಯುಧಗಳನ್ನು ಪೂಜಿಸಲಾಗುತ್ತದೆ. ಅಂದೇ ಪುಸ್ತಕಗಳನ್ನಿಟ್ಟು ಪೂಜಿಸಲಾಗುತ್ತದೆ ಇದಕ್ಕೆ ಸರಸ್ವತಿ ಪೂಜೆ ಎಂದೂ ಕರೆಯುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

Operation Sindoor, ಇದು ನಮಗೆ ಹೆಮ್ಮೆಯ ಸಂಗತಿ: ರಾಜನಾಥ್ ಸಿಂಗ್‌

Operation Sindoor: ರಾಜ್ಯ ಸರ್ಕಾರದಿಂದ ನಾಳೆ ತಿರಂಗಾ ಯಾತ್ರೆ

ಭಾರತ ದಾಳಿ ಭೀತಿ: ಲಾಹೋರ್‌ನಿಂದ ಕೂಡಲೇ ಹೊರಡುವಂತೆ ನಾಗರಿಕರಿಗೆ ಯುಎಸ್‌ ಸೂಚನೆ

ಮುಂದಿನ ಸುದ್ದಿ
Show comments