Publish Date: Wed, 05 Oct 2022 (09:01 IST)
Updated Date: Wed, 05 Oct 2022 (01:04 IST)
ನವದೆಹಲಿ : ಟಿವಿ, ವೆಬ್ಸೈಟ್ಗಳಲ್ಲಿ ಬೆಟ್ಟಿಂಗ್ ಜಾಹೀರಾತು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರ ಖಡಕ್ ಸೂಚನೆ ರವಾನಿಸಿದೆ.
ಸ್ಯಾಟಲೈಟ್ ಟಿವಿ ಮತ್ತು ಒಟಿಟಿ ಪ್ಲಾಟ್ಫಾರ್ಮ್ಗಳಾದ ನೆಟ್ಫ್ಲಿಕ್ಸ್, ಹಾಟ್ಸ್ಟಾರ್ ಮತ್ತು ಅಮೆಜಾನ್ ಪ್ರೈಮ್ ವೀಡಿಯೋ ಮತ್ತು ಇತರ ಡಿಜಿಟಲ್ ಮಾಧ್ಯಮಗಳು ಪ್ರೇಕ್ಷಕರನ್ನು ಗುರಿಯಾಗಿಟ್ಟುಕೊಂಡು ಜೂಜು ಮತ್ತು ಬೆಟ್ಟಿಂಗ್ ಕುರಿತಾಗಿ ಉತ್ತೇಜಿಸುವ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ದೇಶದಲ್ಲಿ ತಕ್ಷಣವೇ ನಿಲ್ಲಿಸಬೇಕು.
ಇಲ್ಲದಿದ್ದಲ್ಲಿ ದಂಡ ಹಾಕಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಆದೇಶಿಸಿದೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ, ಬೆಟ್ಟಿಂಗ್ ಸೈಟ್ಗಳ ಜಾಹೀರಾತುಗಳನ್ನು ಪ್ರಸಾರ ಮಾಡದಂತೆ ಸುದ್ದಿ ವೆಬ್ಸೈಟ್ಗಳು, ಒಟಿಟಿ ಪ್ಲಾಟ್ಫಾರ್ಮ್ಗಳು ಮತ್ತು ಖಾಸಗಿ ಉಪಗ್ರಹ ಚಾನೆಲ್ಗಳಿಗೆ ಸೂಚನೆ.