Publish Date: Fri, 22 Jul 2022 (06:06 IST)
Updated Date: Fri, 22 Jul 2022 (00:39 IST)
ನವದೆಹಲಿ : ದೇಶದ ಪ್ರಥಮ ಪ್ರಜೆಯಾಗಿ ಇದೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಯೊಬ್ಬರು ಆಯ್ಕೆಯಾಗಿದ್ದಾರೆ.
ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ನಿರೀಕ್ಷೆಗಿಂತ ಹೆಚ್ಚು ಮತ ಪಡೆದು 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ಪ್ರತಿಸ್ಪರ್ಧಿ, ವಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ನಿರೀಕ್ಷೆಯಂತೆ ಸೋಲು ಕಂಡಿದ್ದಾರೆ. ದ್ರೌಪದಿ ಮುರ್ಮು ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ, ವಿಪಕ್ಷ ನಾಯಕರು ಸೇರಿ ಹಲವರು ಅಭಿನಂದನೆ ಸಲ್ಲಿಸಿದ್ದಾರೆ.