Select Your Language

Notifications

webdunia
webdunia
webdunia
webdunia

ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳಿಗೆ ಶಾಕ್ !

ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳಿಗೆ ಶಾಕ್ !
ಬೆಂಗಳೂರು , ಬುಧವಾರ, 31 ಮೇ 2023 (11:15 IST)
ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಬೆಂಗಳೂರು, ಹಾವೇರಿ, ಶಿವಮೊಗ್ಗ ಹಾಗೂ ತುಮಕೂರಿನ ಕೆಲವು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಬೆಂಗಳೂರಿನಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಸ್ಕಾಂನ ಟೆಕ್ನಿಕಲ್ ನಿರ್ದೇಶಕ ರಮೇಶ್ ಅವರ ಬಸವೇಶ್ವರ ನಗರದ ಮನೆ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ ಇಂಡಸ್ಟ್ರೀಸ್ ಆಂಡ್ ಬಾಯ್ಲರ್ ಇಲಾಖೆಯ ಉಪನಿರ್ದೇಶಕ ಟಿವಿ ನಾರಾಯಣಪ್ಪ ಅವರ ಮನೆ ಮೇಲೆ ಸಹ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಬ್ಬರೂ ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ದಾಳಿ ವೇಳೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. 

ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ ಶೆಟ್ಟರ್ ಅವರ ರಾಣೇಬೆನ್ನೂರಿನಲ್ಲಿರುವ ಮನೆ ಮತ್ತು ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ನಿರ್ಮಿತಿ ಕೇಂದ್ರ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ