Publish Date: Mon, 21 Nov 2022 (15:47 IST)
Updated Date: Mon, 21 Nov 2022 (20:50 IST)
ಜಕಾರ್ತ್ : ಇಂಡೋನೆಷ್ಯಾದ ಜಾವಾದಲ್ಲಿ ನಡೆದ 5.6 ತೀವ್ರತೆಯ ಭೂಕಂಪಕ್ಕೆ 40ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಸ್ಥಳೀಯ ಆಡಳಿತದ ಹಿರಿಯ ಅಧಿಕಾರಿ ನೀಡಿರುವ ಮಾಹಿತಿ ಪ್ರಕಾರ ಸೋಮವಾರ ಮಧ್ಯಾಹ್ನ ಸಂಭವಿಸಿದ ಭೂಕಂಪಕ್ಕೆ ಹಲವು ಕಟ್ಟಡಗಳು ನೆಲಸಮವಾಗಿದ್ದು, 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಈಗಾಗಲೇ 300ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಜರ್ಕಾತ್ನ ದಕ್ಷಿಣಆಗ್ನೇಯ ಭಾಗದ 75 ಕಿ.ಮೀ ವರೆಗೆ ಭೂಕಂಪ ಸಂಭವಿಸಿದ್ದು, ಆರಂಭದ 10 ಕಿ.ಮೀ ವ್ಯಾಪ್ತಿಯಲ್ಲಿ ಹೆಚ್ಚಿನ ಸಾವು ಸಂಭವಿಸಿದೆ. ನೂರಾರು ಮನೆ, ಶಾಲೆಗಳಿಗೆ ಹಾನಿಯಾಗಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.