ಕೊಲಂಬೊ : ಆರ್ಥಿಕ ಬಿಕ್ಕಿನಲ್ಲಿ ಸಿಲುಕಿರುವ ಶ್ರೀಲಂಕಾ ರಾಜಕೀಯದಲ್ಲಿ ಪ್ರಮುಖ ಬೆಳವಣೆಗೆಯೊಂದು ನಡೆದಿದ್ದು,
ಭಾನುವಾರ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರನ್ನು ಹೊರತುಪಡಿಸಿ ಉಳಿದ ಎಲ್ಲಾ ಸಂಸತ್ತಿನ ಸಚಿವರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.
ದೇಶದ ಆರ್ಥಿಕ ಬಿಕ್ಕಟ್ಟಿನ ನಡುವೆ ಭಾನುವಾರ ಮಹಿಂದಾ ರಾಜಪಕ್ಸೆ ಅವರು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರನ್ನು ಭೇಟಿ ಮಾಡಿದ್ದಾರೆ.
ಈ ಸಭೆಯಿಂದಾಗಿ ಮಹಿಂದಾ ರಾಜಪಕ್ಸೆ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಊಹಾಪೆಪೋಹಗಳನ್ನು ಇದೀಗ ಹರಿದಾಡುತ್ತಿದೆ. ಅಲ್ಲದೇ ಈ ಸಭೆಯಲ್ಲಿ ಹಲವಾರು ಪ್ರಮುಖ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಈ ಕುರಿತಂತೆ ಶ್ರೀಲಂಕಾದ ಶಿಕ್ಷಣ ಸಚಿವ ದಿನೇಶ್ ಗುಣವರ್ದನಾ ಅವರು, ಭಾನುವಾರ ತಡರಾತ್ರಿ ನಡೆದ ಸಭೆಯಲ್ಲಿ ಅಧ್ಯಕ್ಷ ಗೋಟಾಬಯ ಮತ್ತು ಮಹಿಂದಾ ರಾಜಪಕ್ಸೆ ಅವರನ್ನು ಹೊರತುಪಡಿಸಿ ಸಂಸ ತ್ತಿನ ಎಲ್ಲಾ ಸಚಿವರು ತಮ್ಮ ಸ್ಥಾನಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
.