Select Your Language

Notifications

webdunia
webdunia
webdunia
webdunia

ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ!

ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ!
ಬೆಂಗಳೂರು , ಶುಕ್ರವಾರ, 10 ಡಿಸೆಂಬರ್ 2021 (07:29 IST)
ಬೆಂಗಳೂರು : ಬೇಸಿಗೆಗೂ ಮುನ್ನವೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಬಿಸಿ ತಟ್ಟಲಿದೆ.

ಯುನಿಟ್‌ಗೆ 1 ರೂ. 50 ಪೈಸೆ ಹೆಚ್ಚಳಕ್ಕೆ ಕೆಇಆರ್‌ಸಿಗೆ ಬೆಸ್ಕಾಂ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ. ಹೀಗಾಗಿ ಶೀಘ್ರದಲ್ಲೇ ವಿದ್ಯುತ್ ದರ ಹೆಚ್ಚಳವಾಗಲಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಹಕರ ಕೈ ಸುಡ್ತಿದೆ. ಈ ಬೆನ್ನಲ್ಲೇ ಇದೀಗ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಲಿದೆ. ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಮೆಕ್ಕಾಂ, ಚೆಕ್ಕಾಂ ಸೇರಿದಂತೆ ಇತರೆ ಕಂಪನಿಗಳು ಪ್ರತಿ ಬಾರಿಯಂತೆ ಈ ವರ್ಷವೂ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ನಷ್ಟದ ನೆಪವೊಡ್ಡಿ ಬೆಸ್ಕಾಂ ವ್ಯಾಪ್ತಿಯಲ್ಲಿ 1 ರೂ 50 ಪೈಸೆ ಹೆಚ್ಚಳ ಮಾಡುವಂತೆ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದೆ.
ಯಾವ ವರ್ಷ ಎಷ್ಟೆಷ್ಟು ದರ ಪರಿಷ್ಕರಣೆಯಾಗಿತ್ತು?
2009 ರಲ್ಲಿ ಪ್ರತಿ ಯೂನಿಟ್ಗೆ 34 ಪೈಸೆ ಹೆಚ್ಚಳ
2010 ರಲ್ಲಿ ಪ್ರತಿ ಯೂನಿಟ್ಗೆ 30 ಪೈಸೆ ಹೆಚ್ಚಳ
2011 ರಲ್ಲಿ ಪ್ರತಿ ಯೂನಿಟ್ಗೆ 28 ಪೈಸೆ ಹೆಚ್ಚಳ
2012 ರಲ್ಲಿ ಪ್ರತಿ ಯೂನಿಟ್ಗೆ 13 ಪೈಸೆ ಹೆಚ್ಚಳ
2013 ರಲ್ಲಿ ಪ್ರತಿ ಯೂನಿಟ್ಗೆ 13 ಪೈಸೆ ಹೆಚ್ಚಳ
2017 ರಲ್ಲಿ ಪ್ರತಿ ಯೂನಿಟ್ಗೆ 48 ಪೈಸೆ ಹೆಚ್ಚಳ
2019 ರಲ್ಲಿ ಪ್ರತಿ ಯೂನಿಟ್ಗೆ 35 ಪೈಸೆ ಹೆಚ್ಚಳ
2020 ರಲ್ಲಿ ಪ್ರತಿ ಯೂನಿಟ್ಗೆ 30 ಪೈಸೆ ಹೆಚ್ಚಳ


Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಮುಂದಿನ CDS ಯಾರು?