ತುರ್ತು ಪರಿಸ್ಥಿತಿ ಘೋಷಿಸಿದ ಶ್ರೀಲಂಕಾ!

Webdunia
ಸೋಮವಾರ, 9 ಮೇ 2022 (09:00 IST)
ಕೊಲಂಬೋ : ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಳಾಗಿದೆ.

ಈ ಮೂಲಕ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ 5 ವಾರಗಳ ಅಂತರದಲ್ಲಿ ಎರಡನೇ ಬಾರಿಗೆ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.

ಆರ್ಥಿಕ ಬಿಕ್ಕಟ್ಟಿನ ಬಳಿಕ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಈ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಭದ್ರತಾ ಪಡೆಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಕಳೆದ ಕೆಲ ತಿಂಗಳ ಬಳಿಕ ಶ್ರೀಲಂಕಾದಲ್ಲಿ ಅಗತ್ಯ ವಸ್ತುಗಳು, ಆಹಾರ ಸೇರಿದಂತೆ ತೈಲ ಸಿಗದೆ ಜನ ತತ್ತರಿಸಿ ಹೋಗಿದ್ದರು.

ಆ ಬಳಿಕ ಜನ ಪ್ರತಿಭಟನೆಗೆ ಮುಂದಾಗಿದ್ದರು.  ನಿನ್ನೆ ಅಧ್ಯಕ್ಷರ ವಕ್ತಾರರು ತುರ್ತು ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ್ದು, ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ತಾವು ಕಠಿಣ ಕಾನೂನುಗಳನ್ನು ಜಾರಿಗೊಳಿಸುತ್ತಿದ್ದು,

ಅಗತ್ಯ ಸೇವೆಗಳು ಹಾಗೂ ಶಾಂತಿ ಸುವ್ಯವಸ್ಥೆಗಳ ನಿರ್ವಹಣೆಯ ದೃಷ್ಟಿಯಿಂದ ಅಧ್ಯಕ್ಷರು ತಮ್ಮ ಅಧಿಕಾರ ಬಳಸಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಬಿಎ ಚುನಾವಣೆಗೆ ಗಡುವು ನೀಡಿದ ಸುಪ್ರೀಂ ಕೋರ್ಟ್‌: ಸರ್ಕಾರಕ್ಕೆ ಕೊಟ್ಟ ನಿರ್ದೇಶನ ಏನು ಗೊತ್ತಾ

ವೆನಿಜುವಾಲಗೆ ನಾನೇ ಹಂಗಾಮಿ ಅಧ್ಯಕ್ಷ ಎಂದು ಹೇಳಿಕೊಂಡ ಡೊನಾಲ್ಡ್ ಟ್ರಂಪ್ ಮುಂದಿನ ಗುರಿ ಈ ರಾಷ್ಟ್ರ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಗೆ ಕಾಡ್ತಿದೆ ಆ ನೋವು: ಹೈಕಮಾಂಡ್ ಗೂ ಕೊಟ್ರು ಸೂಕ್ಷ್ಮ ಸಂದೇಶ

ಮುಂದಿನ ಸುದ್ದಿ
Show comments