Webdunia - Bharat's app for daily news and videos

Install App

ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣ : ಅಶ್ವತ್ಥ್ ನಾರಾಯಣ

Webdunia
ಬುಧವಾರ, 29 ಸೆಪ್ಟಂಬರ್ 2021 (12:35 IST)
ಬೆಂಗಳೂರು : ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಆರಂಭ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ನಾಲ್ಕು ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ ಬೋಧನೆ ಮಾಡಲಾಗುವುದು. ಭಾಲ್ಕಿಯ ಭೀಮಣ್ಣ ಖಂಡ್ರೆ ಕಾಲೇಜು, ವಿಜಯಪುರದ ಬಿಎಲ್ ಡಿಇ ಕಾಲೇಜು, ಚಿಕ್ಕಬಳ್ಳಾಪುರದ ಎಸ್.ಜೆ.ಆರ್ ಕಾಲೇಜು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಪ್ರಾರಂಭ ಮಾಡಲಾಗುವುದು. ಈಗಾಗಲೇ ಕನ್ನಡದಲ್ಲಿ ಪಠ್ಯ ಪುಸ್ತಕ ಸಿದ್ಧತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಸಕ್ತ ವರ್ಷ 20,000 ರೂ.ಗಿಂತ ಹೆಚ್ಚು ಶುಲ್ಕವನ್ನು ತೆಗೆದುಕೊಳ್ಳುವಂತಿಲ್ಲ. ಇತರೆ ಶುಲ್ಕಗಳ ಮಿತಿ 20 ಸಾವಿರ ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments