ಬೆಂಗಳೂರು : ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಹೊಸದಾಗಿ ವಯೋಮಿತಿ ನಿಗದಿ ಮಾಡಿರುವ ಸರ್ಕಾರದ ಆದೇಶ ಹಲವು ಗೊಂದಲಗಳಿಗೆ ಕಾರಣವಾಗಿದೆ.
ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ ಸೇರ್ಪಡೆ ಆಗಬೇಕಾದರೆ ಕಡ್ಡಾಯವಾಗಿ ವಿದ್ಯಾರ್ಥಿಗೆ 6 ವರ್ಷ ತುಂಬಿರಬೇಕು ಎಂದು ಆದೇಶ ಹೊರಡಿಸಿತ್ತು.
ಒಂದನೇ ತರಗತಿಗೆ ದಾಖಲಾತಿ ಆಗಬೇಕದರೆ ಜೂನ್ 1ಕ್ಕೆ 6 ವರ್ಷ ತುಂಬಿರಬೇಕು ಎಂದು ಆದೇಶದಲ್ಲಿ ಉಲ್ಲೇಖ ಮಾಡಿರುವುದು ಗೊಂದಲಗಳಿಗೆ ಕಾರಣವಾಗಿದೆ.
ಆದೇಶದಲ್ಲಿ ಆರ್ಟಿಇ ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ 2012ನ್ನು ಉಲ್ಲೇಖ ಮಾಡಲಾಗಿದೆ. ಈ ಆದೇಶದಲ್ಲಿ ಅನೇಕ ಗೊಂದಲಗಳಿದ್ದು, ಯಾವುದಕ್ಕೂ ಶಿಕ್ಷಣ ಇಲಾಖೆ ಸರಿಯಾಗಿ ಉತ್ತರ ನೀಡಿಲ್ಲ.