Publish Date: Tue, 28 Sep 2021 (12:56 IST)
Updated Date: Tue, 28 Sep 2021 (12:59 IST)
ಬೆಂಗಳೂರು,ಸೆ.28 : ಸಿವಿಲ್ ಪೊಲೀಸ್ ಸಬ್ಇನ್ಸ್ಪೆಕ್ಟರ್(ಪುರುಷ ಮತ್ತು ಮಹಿಳೆ) 545 ಹುದ್ದೆಗಳ ನೇಮಕಾತಿಗೆ ಅ.3ರಂದು ಲಿಖಿತ ಪರೀಕ್ಷೆ ನಡೆಯಲಿದೆ.
ಸುಮಾರು 14,100 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಅಭ್ಯರ್ಥಿಗಳಿಗೆ ಈಗಾಗಲೇ ಮಾಹಿತಿಯನ್ನು ಇಲಾಖಾ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಲಾಗಿದೆ.
ನಗರದಲ್ಲಿನ 21 ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 3 ಗಂಟೆಯಿಂದ ಮಧ್ಯಾಹ್ನ 4.30ರವರೆಗೆ ಪತ್ರಿಕೆ-2 ಲಿಖಿತ ಪರೀಕೆ ನಡೆಯಲಿದೆ.
ಅರ್ಹ ಅಭ್ಯರ್ಥಿಗಳು ಕರೆಪತ್ರವನ್ನು ವೆಬ್ಸೈಟ್ www.recruitment.ksp.gov.in ನಲ್ಲಿ ಡೌನ್ಲೋಡ್ ಮಾಡಿಕೊಂಡು ಸರಿಯಾದ ಸಮಯಕ್ಕೆ ಸೂಚಿಸಿದ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವಂತೆ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.