Select Your Language

Notifications

webdunia
webdunia
webdunia
webdunia

ಕೇರಳದಲ್ಲಿ ಹಕ್ಕಿ ಜ್ವರದ ಭೀತಿ!

ಕೇರಳದಲ್ಲಿ ಹಕ್ಕಿ ಜ್ವರದ ಭೀತಿ!
ತಿರುವನಂತಪುರಂ , ಸೋಮವಾರ, 26 ಡಿಸೆಂಬರ್ 2022 (12:02 IST)
ತಿರುವನಂತಪುರಂ : ಕೇರಳದ ಕೊಟ್ಟಾಯಂ ಜಿಲ್ಲೆಯ 3 ಪಂಚಾಯಿತಿಗಳಲ್ಲಿ ಏಕಾಏಕಿ ಹಕ್ಕಿ ಜ್ವರ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ 6,000ಕ್ಕೂ ಅಧಿಕ ಪಕ್ಷಿಗಳನ್ನು ಹತ್ಯೆ ಮಾಡಲಾಗಿದೆ.
 
ಈಗಾಗಲೇ ಜಗತ್ತಿನಾದ್ಯಂತ ಕೊರೊನಾ ಭೀತಿ ಆವರಿಸಿದ್ದು, ಈ ಮಧ್ಯೆ ದೇಶದಲ್ಲಿ ಹಕ್ಕಿ ಜ್ವರ ಸದ್ದು ಮಾಡುತ್ತಿದೆ.

ಕೇರಳದ ಕೊಟ್ಟಾಯಂ ಜಿಲ್ಲೆಯ ವೇಚೂರು, ನಿಂದೂರು ಮತ್ತು ಅರ್ಪೂಕರ ಪಂಚಾಯಿತಿ ವ್ಯಾಪ್ತಿಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಈ ಬೆನ್ನಲ್ಲೇ 6,017 ಪಕ್ಷಿಗಳನ್ನು ಸಂಹರಿಸಲಾಗಿದೆ. ಅದರಲ್ಲೂ ಹೆಚ್ಚಾಗಿ ಬಾತುಕೋಳಿಗಳಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಕೇರಳದ ವೇಚೂರಿನಲ್ಲಿ ಸುಮಾರು 133 ಬಾತುಕೋಳಿಗಳು ಮತ್ತು 156 ಕೋಳಿಗಳು, ನಿಂದೂರಿನಲ್ಲಿ 2,753 ಬಾತುಕೋಳಿಗಳು ಮತ್ತು ಅರ್ಪೂಕರದಲ್ಲಿ 2,975 ಬಾತುಕೋಳಿಗಳನ್ನು ಕೊಲ್ಲಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ?